Home ರಾಜ್ಯ ಸಂತೋಷ್ ಆತ್ಮಹತ್ಯೆ: ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ವೆಲ್ಫೇರ್ ಪಾರ್ಟಿ ಆಗ್ರಹ

ಸಂತೋಷ್ ಆತ್ಮಹತ್ಯೆ: ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ವೆಲ್ಫೇರ್ ಪಾರ್ಟಿ ಆಗ್ರಹ

ಬೆಂಗಳೂರು: ಸಂತೋಷ್ ಪಾಟೀಲ್ ಗೆ ನ್ಯಾಯ ಕೊಡಿಸಿ, ಸಚಿವ ಕೆ.ಎಸ್ ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸಿ ಸಂಪುಟದಿಂದ ಕೂಡಲೇ ವಜಾಗೊಳಿಸಬೇಕು ಎಂದು ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ತಾಹಿರ್ ಹುಸೇನ್ ಆಗ್ರಹಿಸಿದ್ದಾರೆ.
ಸಂತೋಷ್ ಕೆ.ಪಾಟೀಲ್ ವಾಟ್ಸಪ್ ಮೆಸೇಜ್ ನಲ್ಲಿ ನನ್ನ ಸಾವಿಗೆ ಸಚಿವ ಈಶ್ವರಪ್ಪ ನೇರ ಕಾರಣ ಎಂದು ಆರೋಪಿಸಿದ್ದಾರೆ. ಅವರ ಆರೋಪ ಡೆತ್ ನೋಟ್ ಗೆ ಸಮಾನ ಎಂದರು.


ಸಂತೋಷ್ ಪಾಟೀಲ ಈ ಹಿಂದೆಯೇ ಈಶ್ವರಪ್ಪ ವಿರುದ್ಧ ಆರೋಪ ಮಾಡಿದ್ದರು. ರಸ್ತೆ ಕಾಮಗಾರಿ ವಿಷಯದಲ್ಲಿ ಅವರಿಗೆ ಕಮಿಷನ್ ನೀಡಿದ್ದೇನೆ. ಇನ್ನೂ ಹೆಚ್ಚು ಕಮಿಷನ್ ಬೇಡಿಕೆ ಸಲ್ಲಿಸಿದ್ದರು. ಅವರ ಕಾಟ ತಡೆಯಲಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದೇನೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.


ಈಶ್ವರಪ್ಪ ಪ್ರಕರಣದ ಕುರಿತು ಏನು ಹೇಳಿದರು ಎಂಬುದು ಮುಖ್ಯವಲ್ಲ. ನೇರ ಆರೋಪ ಮಾಡಿರುವುದರಿಂದ ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸಬೇಕು ಮತ್ತು ಸಚಿವ ಸಂಪುಟದಿಂದ ಕೂಡಲೇ ವಜಾಗೊಳಿಸಬೇಕು. ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Join Whatsapp
Exit mobile version