ಕಾರವಾರ: ಭಟ್ಕಳದ ರಹಮತಾಬಾದ್ ಏರಿಯಾದಲ್ಲಿ ರಸ್ತೆ ಬದಿಯಲ್ಲಿ ಕಸ ರಾಶಿ ಬಿದ್ದು, ಕೊಳೆತು ಕೆಟ್ಟ ವಾಸನೆ ಬರುತ್ತಿರುವುದನ್ನು ಗಮನಿಸಿದ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕಾರ್ಯಕರ್ತರು, ಬ್ಲಾಕ್ ಅಭಿವೃದ್ಧಿ ಅಧಿಕಾರಿಯನ್ನು ಭೇಟಿಯಾಗಿ ತಕ್ಷಣ ಕಸವನ್ನು ತೆರವುಗೊಳಿಸುವಂತೆ ಮನವಿ ಮಾಡಿದರು.
ಸದ್ಯ ಇಲ್ಲಿ ಕಸದ ಬಿದ್ದಿರುವುದರಿಂದ ಸಾರ್ವಜನಿಕರು ಮೂಗು ಮುಚ್ಚಿಕೊಂಡು ಹೋಗಬೇಕಾಗುತ್ತಿದೆ. ಮಾತ್ರವಲ್ಲ ಈ ಪರಿಸರದಲ್ಲಿ ಸೊಳ್ಳೆಗಳು ಹೆಚ್ಚಾಗಿರುವುದರಿಂದ ಪುಟಾಣಿ ಮಕ್ಕಳು ಡೆಂಗಿ ಜ್ವರಕ್ಕೆ ತುತ್ತಾಗುವ ಸಾಧ್ಯತೆಯಿದೆ.
ಈ ನಿಟ್ಟಿನಲ್ಲಿ ಇಲ್ಲಿನ ಕಸದ ರಾಶಿಯನ್ನು ತೆರವುಗೊಳಿಸಿ ಸಾರ್ವಜನಿಕರಿಗೆ ನೆರವಾಗಬೇಕೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ತನ್ನ ಮನವಿಯಲ್ಲಿ ಉಲ್ಲೇಖಿಸಿದೆ.