ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಅಧಿಕಾರಕ್ಕಾಗಿನ ತಮ್ಮ ಒಳಜಗಳದಿಂದಾಗಿ ರಾಜ್ಯದಲ್ಲಿ ಇಡೀ ಶಿಕ್ಷಣ ವ್ಯವಸ್ಥೆ ಪಾತಾಳಕ್ಕೆ ಕುಸಿದಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಬೀಬುಲ್ಲಾ ಖಾನ್ ಆರೋಪಿಸಿದ್ದಾರೆ.
ಕೊರೋನಾ ಸಮಯದಲ್ಲಿ ಪರೀಕ್ಷೆ ಎದುರಿಸುವಂತೆ ಒತ್ತಡ ಹಾಕುವುದರಿಂದ ಹಿಡಿದು, ಶಾಲೆಗಳನ್ನು ಮರು ಆರಂಭಿಸುವ ಕುರಿತಂತೆ ಸರ್ಕಾರದ ಬಳಿ ಯಾವುದೇ ಸ್ಪಷ್ಟ ಯೋಜನೆಗಳಿಲ್ಲ ಎಂದು ಅವರು ಆರೋಪಿಸಿದ್ದಾರೆ. ಇದರಿಂದಾಗಿ ರಾಜ್ಯದ ಅಸಂಖ್ಯಾತ ಮಕ್ಕಳ ಭವಿಷ್ಯ ಮುಂದೇನು ಎಂದು ಯೋಚಿಸುವಂತಾಗಿದೆ. ಅದೇ ರೀತಿ ಸರ್ಕಾರಿ ಶಾಲಾ ಮಕ್ಕಳ ಪರಿಸ್ಥಿತಿ ಇನ್ನೂ ಕೆಳಮಟ್ಟದಲ್ಲಿದ್ದು, ಬಡವರ ಮಕ್ಕಳು ಶಿಕ್ಷಣ ಪಡೆಯಲು ಕೂಡಾ ಸರ್ಕಾರದ ಬಳಿ ಯಾವುದೇ ಯೋಜನೆಗಳಿಲ್ಲ ಎಂದವರು ಬಿಡುಗಡೆಗೊಳಿಸಿರುವ ಪಕ್ಷದ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.