ರಾಜ್ಯದಲ್ಲಿ ಜನರ ಆರೋಗ್ಯ ಹದಗೆಡುತ್ತಿದ್ದು ಪರ್ಯಾಯ ವ್ಯವಸ್ಥೆಗೆ ಸರಕಾರ ಮುಂದಾಗಬೇಕು : ವೆಲ್ಫೇರ್ ಪಾರ್ಟಿ ಒತ್ತಾಯ

Prasthutha|

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕು ಹೆಚ್ಚುತ್ತಿದ್ದು, ಜನತೆ ತತ್ತರಿಸುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರಾದ ತಾಹಿರ್ ಹುಸೇನ್, ರಾಜ್ಯದಲ್ಲಿ ಜನರ ಆರೋಗ್ಯ ಹದಗೆಡುತ್ತಿದ್ದು ಪರ್ಯಾಯ ವ್ಯವಸ್ಥೆಗೆ ಸರಕಾರ ಮುಂದಾಗಬೇಕೆಂದು ಒತ್ತಾಯಿಸಿದ್ದಾರೆ.

- Advertisement -

ರಾಜ್ಯದಲ್ಲಿ ಜನರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ. ಅದರಲ್ಲಿ ವಿಶೇಷವಾಗಿ ಗರ್ಭಿಣಿಯರು, ಹೃದಯ ಸಂಬಂಧಿ ಕಾಯಿಲೆಗಳು, ಶುಗರ್, ಬಿಪಿ ಸೇರಿ ಸಣ್ಣಪುಟ್ಟ ಕಾಯಿಲೆಗಳು ಇರುವ ರೋಗಿಗಳು ಚಿಕಿತ್ಸೆಗೆಂದು ಆಸ್ಪತ್ರಗಳಿಗೆ ಹೋದರೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ ಎಂದು ಅವರು ರಾಜ್ಯ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೇವಲ ಕರೋನ ರೋಗಿಗಳಿಗೆ ಮಾತ್ರವೇ ಆಸ್ಪತ್ರೆಗಳು ಇವೆಯೇನೋ ಎನ್ನುವಷ್ಟರ ಮಟ್ಟಿಗೆ ಆರೋಗ್ಯ ಇಲಾಖೆ ಇತರೆ ವ್ಯಾಧಿಗಳ ಬಗ್ಗೆ ಕಾಳಜಿ ವಹಿಸದೆ ಇರುವುದು, ಇತರೆ ರೋಗಿಗಳಿಗೆ ತೀವ್ರ ಸಮಸ್ಯೆ ಉಂಟಾಗಿದೆ. ಈ ಕೂಡಲೇ ಸರಕಾರ  ಕರೋನ ರೋಗಿಗಳ ತಪಾಸಣೆ ಜೊತೆಗೆ ಇತರೆ ರೋಗಿಗಳಿಗೆ ಪರ್ಯಾಯವಾಗಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಮುಂದಾಗಬೇಕು. ಈಗಾಗಲೇ ಕೋವಿಡ್ ಸಾಂಕ್ರಾಮಿಕ ರೋಗದಿಂದ ಆಸ್ಪತ್ರೆಗಳು ತುಂಬಿ ತುಳುಕುತ್ತಿದೆ. ಹಾಗಾಗಿ ಸಾಮಾನ್ಯವಾಗಿರುವ ಲಕ್ಷಣ ಇರುವರಿಗೆ ಸರಿಯಾಗಿ ಚಿಕಿತ್ಸೆ ನೀಡಲು ಸರಕಾರದಿಂದ ಸಾಧ್ಯವಾಗುತ್ತಿಲ್ಲ ಎನಿಸುತ್ತಿದೆ. ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡು ಕೋವಿಡ್ ಮಹಾಮಾರಿಯ ಜೊತೆಗೆ ಇತರೆ ರೋಗಿಗಳಿಗೆ ಚಿಕಿತ್ಸೆ ನೀಡುವ ಕೆಲಸಕ್ಕೆ ತೀವ್ರ ಗತಿಯಲ್ಲಿ ಮುಂದಾಗಬೇಕೆಂದು ಅವರು ಮನವಿ ಮಾಡಿದ್ದಾರೆ.

Join Whatsapp