ಪಶ್ಚಿಮ ಬಂಗಾಳ: ಹೌರಾದಲ್ಲಿ ಕಳ್ಳಬಟ್ಟಿ ಸೇವಿಸಿ 7 ಮಂದಿ ಸಾವು

Prasthutha|

ಹೌರಾ (ಪಶ್ಚಿಮ ಬಂಗಾಳ): ನಕಲಿ ಮದ್ಯ ಕುಡಿದು ಏಳು ಜನರು ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಘುಸುರಿ ಪ್ರದೇಶದಲ್ಲಿ ನಡೆದಿದೆ.

- Advertisement -

ಇನ್ನೂ ಆರು ಜನರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಅವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಸುದ್ದಿಗಾರರ ಜೊತೆ ಮಾತನಾಡಿದ ಹೌರಾ ಪೊಲೀಸ್ ಆಯುಕ್ತ ಪ್ರವೀಣ್ ಕುಮಾರ್ ತ್ರಿಪಾಠಿ, “ಇಂದು ಬೆಳಿಗ್ಗೆ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಅಸ್ವಸ್ಥರಾಗಿದ್ದಾರೆ. ಮೇಲ್ನೋಟಕ್ಕೆ, ಹೌರಾದಲ್ಲಿ ನಕಲಿ ಮದ್ಯವನ್ನು ಸೇವಿಸಿದ ನಂತರ ಈ ಘಟನೆ ನಡೆದಿದೆ ಎಂದು ಅಭಿಪ್ರಾಯಟ್ಟಿದ್ದಾರೆ.

Join Whatsapp