Home ಟಾಪ್ ಸುದ್ದಿಗಳು ರಾಷ್ಟ್ರಧ್ವಜ ತಲೆಕೆಳಗಾಗಿ ಹಾರಿಸಿದ ಪಶ್ಚಿ ಬಂಗಾಳ ಬಿಜೆಪಿ ಅಧ್ಯಕ್ಷ | ಪ್ರತಿಪಕ್ಷಗಳ ವಾಗ್ದಾಳಿ

ರಾಷ್ಟ್ರಧ್ವಜ ತಲೆಕೆಳಗಾಗಿ ಹಾರಿಸಿದ ಪಶ್ಚಿ ಬಂಗಾಳ ಬಿಜೆಪಿ ಅಧ್ಯಕ್ಷ | ಪ್ರತಿಪಕ್ಷಗಳ ವಾಗ್ದಾಳಿ

ಕೊಲ್ಕತಾ : ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಬೀರ್ ಭೂಮ್ ಜಿಲ್ಲೆಯ ಬಿಜೆಪಿ ಕಚೇರಿಯಲ್ಲಿ ನಿನ್ನೆ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಿ ವಿವಾದಕ್ಕೀಡಾಗಿದ್ದಾರೆ. ಘಟನೆಯ ಬಗ್ಗೆ ಪ್ರತಿಪಕ್ಷಗಳು ಬಿಜೆಪಿಯನ್ನು ಲೇವಡಿ ಮಾಡಲಾರಂಭಿಸಿವೆ.

ಪಕ್ಷದ ರಾಮ್ ಪುರಹಾತ್ ಕಚೇರಿಯಲ್ಲಿ ರಾಷ್ಟ್ರಧ್ವಜ ಹಾರಿಸಿದ ತಕ್ಷಣ ರಾಷ್ಟ್ರಧ್ವಜ ತಲೆ ಕೆಳಗಾಗಿರುವುದು ಘೋಷ್ ಗಮನಕ್ಕೆ ಬಂದಿದೆ. ಹಸಿರು ಬಣ್ಣ ಮೇಲ್ಭಾಗದಲ್ಲಿ, ಕೇಸರಿ ಬಣ್ಣ ಕೆಳಭಾಗದಲ್ಲಿತ್ತು. ನಂತರ ಅದನ್ನು ಕೆಳಗಿಳಿಸಿ, ಸರಿಯಾಗಿ ಧ್ವಜಾರೋಹಣ ಮಾಡಲಾಯಿತು.

ರಾಷ್ಟ್ರಧ್ವಜವನ್ನು ಸರಿಯಾಗಿ ಹಾರಿಸಲು ಬಾರದವರು ದೇಶ ಅಥವಾ ರಾಜ್ಯವನ್ನು ಮುನ್ನಡೆಸಲು ಅನರ್ಹರು” ಎಂದು ಟಿಎಂಸಿ ವಾಗ್ದಾಳಿ ನಡೆಸಿದೆ.

ಆದರೆ, ಈ ಬಗ್ಗೆ ಪ್ರತಿಕ್ರಿಯಿಸಿರುವ ಘೋಷ್, “ಇದು ಮುಜುಗರದ ಕ್ಷಣ, ಅಜಾಗರೂಕತೆಯಿಂದ ಆದ ಪ್ರಮಾದ. ಯಾರಿಗೂ ರಾಷ್ಟ್ರಧ್ವಜವನ್ನು ಅವಮಾನಿಸುವ ಉದ್ದೇಶವಿರಲಿಲ್ಲ. ಭವಿಷ್ಯದಲ್ಲಿ ಇಂಥ ವಿಚಾರದಲ್ಲಿ ಎಚ್ಚರ ವಹಿಸುವಂತೆ ಪಕ್ಷದ ಸದಸ್ಯರಿಗೆ ಸೂಚಿಸಿದ್ದೇನೆ” ಎಂದು ತಿಳಿಸಿದ್ದಾರೆ.

Join Whatsapp
Exit mobile version