Home ಟಾಪ್ ಸುದ್ದಿಗಳು ಪಶ್ಚಿಮ ಬಂಗಾಳ: ಬಾಂಬ್ ಸ್ಪೋಟ, ಬಾಲಕ ಸಾವು

ಪಶ್ಚಿಮ ಬಂಗಾಳ: ಬಾಂಬ್ ಸ್ಪೋಟ, ಬಾಲಕ ಸಾವು

ಕೋಲ್ಕತ್ತ: ಪಶ್ಚಿಮ ಬಂಗಾಳದ ಹೂಘ್ಲಿ ಜಿಲ್ಲೆಯಲ್ಲಿ ಬಾಂಬ್ ಸ್ಪೋಟಿಸಲಾಗಿದ್ದು, ಓರ್ವ ಬಾಲಕ ಮೃತಪಟ್ಟಿದ್ದಾನೆ. ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ. ಗಾಯಾಳುಗಳನ್ನು ಸ್ಥಳೀಯ ಆರೋಗ್ಯ ಕೇಂದ್ರಗಳಿಗೆ ದಾಖಲಿಸಲಾಗಿದ್ದು, ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಪೊಲೀಸರ ಪ್ರಕಾರ, ಮಕ್ಕಳು ಗುಂಪು ಆಟವಾಡುತ್ತಿದ್ದಾಗ ಬಾಂಬ್ ಸ್ಫೋಟಗೊಂಡಿದ್ದು, ಮೂವರು ಗಾಯಗೊಂಡಿದ್ದಾರೆ. ಅವರನ್ನು ಪಾಂಡುವ ಆಸ್ಪತ್ರೆಗೆ ಕಳುಹಿಸಲಾಯಿತು, ಓರ್ವ ಸಾವನ್ನಪ್ಪಿದ್ದಾರೆ. ಉಳಿದ ಇಬ್ಬರಿಗೆ ಗಾಯಗಳ ತೀವ್ರತೆಯಿಂದಾಗಿ ಚುಂಚೂರ ಇಮಾಂಬರ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಕುರಿತು ಹೂಗ್ಲಿ ಗ್ರಾಮಾಂತರ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Join Whatsapp
Exit mobile version