ಆಗಸ್ಟ್ 3 ರಂದು ಪಶ್ಚಿಮ ಬಂಗಾಳ ಸಚಿವ ಸಂಪುಟ ಪುನಾರಚನೆ: ಮಮತಾ ಬ್ಯಾನರ್ಜಿ

Prasthutha|

ನವದೆಹಲಿ: ಆಗಸ್ಟ್ 3 ರಂದು ಸಚಿವ ಸಂಪುಟದ ಪುನಾರಚನೆ ನಡೆಯಲಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

- Advertisement -

ಈ ವೇಳೆ ಐದರಿಂದ ಆರು ಹೊಸ ಮುಖಗಳನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಲಾಗುವುದು ಎಂದ ಅವರು ಕೆಲವರ ಸಚಿವ ಸ್ಥಾನವನ್ನು ಹಿಂಪಡೆದು ಪಕ್ಷ ಸಂಘಟನೆಯ ಜಬಾಬ್ದಾರಿಯನ್ನು ನೀಡಲಾಗುವುದೆಂದು ತಿಳಿಸಿದ್ದಾರೆ.

ಇತ್ತೀಚೆಗೆ ನಿಧನರಾದ ಹಿರಿಯ ಮುಖಂಡ ಸುಬ್ರತಾ ಮುಖರ್ಜಿ, ಸಾಧನ್ ಪಾಂಡೆ ಮತ್ತು ಜೈಲಿನಲ್ಲಿರುವ ಪಾರ್ಥ ಚಟರ್ಜಿ ಅವರ ಸ್ಥಾನಕ್ಕೆ ಹೊಸಬರನ್ನು ಆಯ್ಕೆ ಮಾಡಲಾಗುವುದೆಂದು ಅವರು ತಿಳಿಸಿದರು.

- Advertisement -

ಇಡೀ ಸಚಿವ ಸಂಪುಟವನ್ನು ವಿಸರ್ಜಿಸಿ, ಹೊಸ ಸಚಿವ ಸಂಪುಟವನ್ನು ಆಯ್ಕೆ ಮಾಡಲಿದ್ದಾರೆ ಎಂಬ ಊಹಾಪೋಹವನ್ನು ಅವರು ತಳ್ಳಿಹಾಕಿದರು. ಇಬ್ಬರು ಹಿರಿಯ ಸಚಿವರು ನಿಧನರಾದ ಬಳಿಕ ಮತ್ತು ಪಾರ್ಥ ಚಟರ್ಜಿ ಬಂಧನದ ಬಳಿಕ ಮಮತಾ ಬ್ಯಾನರ್ಜಿ ಅವರು ಪಕ್ಷದಲ್ಲಿ ಹೆಚ್ಚಿನ ಉಸ್ತುವಾರಿಯನ್ನು ವಹಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಸಚಿವ ಸಂಪುಟ ಸಭೆಯಲ್ಲಿ ಪಕ್ಷದ ಪ್ರತಿಷ್ಠೆಗೆ ಧಕ್ಕೆ ತರುವಂತಹ ಯಾವುದೇ ಕೃತ್ಯಕ್ಕೆ ಕೈ ಹಾಕದಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಚಿವರನ್ನು ಒತ್ತಾಯಿಸಿದ್ದಾರೆ. ಅಲ್ಲದೆ ಟಿಎಂಸಿ ಹಲವಾರು ಜಿಲ್ಲಾಧ್ಯಕ್ಷರನ್ನು ಬದಲಿಸಿ ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ ಎಂದು ತಿಳಿದು ಬಂದಿದೆ.

Join Whatsapp