Home ಟಾಪ್ ಸುದ್ದಿಗಳು ಪಶ್ಚಿಮ ಬಂಗಾಳ: ಫೇಸ್’ಬುಕ್ ನಲ್ಲಿ ನೂಪುರ್ ಶರ್ಮಾ ಬೆಂಬಲಿಸಿದ ಕಾಲೇಜು ವಿದ್ಯಾರ್ಥಿ ಬಂಧನ

ಪಶ್ಚಿಮ ಬಂಗಾಳ: ಫೇಸ್’ಬುಕ್ ನಲ್ಲಿ ನೂಪುರ್ ಶರ್ಮಾ ಬೆಂಬಲಿಸಿದ ಕಾಲೇಜು ವಿದ್ಯಾರ್ಥಿ ಬಂಧನ

ಕೋಲ್ಕತ್ತಾ: ಪ್ರವಾದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಮಾಜಿ ಮುಖಂಡೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಫೇಸ್’ಬುಕ್ ನಲ್ಲಿ ಪೋಸ್ಟ್ ಮಾಡಿದ ಕಾಲೇಜು ವಿದ್ಯಾರ್ಥಿಯನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ

ಫೇಸ್’ಬುಕ್ ಪೋಸ್ಟ್ ಬೆಳಕಿಗೆ ಬರುತ್ತಿದ್ದಂತೆ ಮುರ್ಷಿದಾಬಾದ್ ಜಿಲ್ಲೆಯ ಬೆಲ್ಡಂಗಾ ಎಂಬಲ್ಲಿ ಕಾಲೇಜು ವಿದ್ಯಾರ್ಥಿಯನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿತ್ತು.

ಸದ್ಯ ಬಂಧಿತ ವಿದ್ಯಾರ್ಥಿಯನ್ನು ಬಹರಂಪುರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 10 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Join Whatsapp
Exit mobile version