Home ಟಾಪ್ ಸುದ್ದಿಗಳು ಸಿಬಿಐ ತನಿಖೆ ವಿರುದ್ದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪಶ್ಚಿಮ ಬಂಗಾಳ ಸರಕಾರ

ಸಿಬಿಐ ತನಿಖೆ ವಿರುದ್ದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪಶ್ಚಿಮ ಬಂಗಾಳ ಸರಕಾರ

ಕೋಲ್ಕತ್ತ : ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರದ ತನಿಖೆಯನ್ನು ಸಿಬಿಐ ನಡೆಸುತ್ತಿದೆ. ಇದನ್ನು ಪ್ರಶ್ನಿಸಿರುವ ಪಶ್ಚಿಮ ಬಂಗಾಳ ಸರ್ಕಾರವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಂತರ ನಡೆದ ಕೊಲೆಗಳು ಮತ್ತು ಅತ್ಯಾಚಾರ ಪ್ರಕರಣಗಳ ಕುರಿತು ಸಿಬಿಐ ತನಿಖೆಗೆ ಕಲ್ಕತ್ತಾ ಹೈಕೋರ್ಟ್ ಆದೇಶಿಸಿತ್ತು.

‘ಕೇಂದ್ರದ ಆಜ್ಞೆಯಂತೆ ಸಿಬಿಐ ಕೆಲಸ ಮಾಡುತ್ತಿದೆ. ಟಿಎಂಸಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಎಫ್‌ಐಆರ್‌ ದಾಖಲಾಗುತ್ತಿವೆ. ಸಿಬಿಐನಿಂದ ನ್ಯಾಯಯುತ ತನಿಖೆಯನ್ನು ನಿರೀಕ್ಷಿಸಬೇಡಿ’ ಎಂದು ಪಶ್ಚಿಮ ಬಂಗಾಳ ಸರ್ಕಾರ ಹೇಳಿದೆ.ಚುನಾವಣೋತ್ತರ ಹಿಂಸಾಚಾರ ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರಚಿಸಿದ್ದ ಸಮಿತಿ ಈ ಹಿಂದೆ ಶಿಫಾರಸು ಮಾಡಿತ್ತು.

Join Whatsapp
Exit mobile version