Home ಟಾಪ್ ಸುದ್ದಿಗಳು ‘ಅತ್ಯಾಚಾರ ತಡೆ ಮಸೂದೆ’ ಮಂಡಿಸಿದ ಪಶ್ಚಿಮ ಬಂಗಾಳ ಸರ್ಕಾರ

‘ಅತ್ಯಾಚಾರ ತಡೆ ಮಸೂದೆ’ ಮಂಡಿಸಿದ ಪಶ್ಚಿಮ ಬಂಗಾಳ ಸರ್ಕಾರ

ಕೋಲ್ಕತ್ತ: ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಇಂದು (ಮಂಗಳವಾರ) ವಿಧಾನಸಭೆಯಲ್ಲಿ ‘ಅತ್ಯಾಚಾರ ತಡೆ ಮಸೂದೆ’ಯನ್ನು ಮಂಡಿಸಿದೆ.


ಪಶ್ಚಿಮ ಬಂಗಾಳದ ಕಾನೂನು ಸಚಿವ ಮೊಲೊಯ್ ಘಾಟಕ್ ಅವರು ರಾಜ್ಯ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಿದರು.


ಪ್ರಸ್ತಾವಿತ ಮಸೂದೆ ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆ ಮೃತಪಟ್ಟರೆ ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಲು ಅವಕಾಶ ಇದೆ. ಅಲ್ಲದೇ ಅತ್ಯಾಚಾರ ಮತ್ತು ಸಾಮೂಹಿಕ ಅತ್ಯಾಚಾರದ ಅಪರಾಧಿಗಳಿಗೆ ಪೆರೋಲ್ ನೀಡದೆ ಜೀವಾವಧಿ ಶಿಕ್ಷೆಯನ್ನು ವಿಧಿಸುವ ಪ್ರಸ್ತಾವ ಮಸೂದೆಯಲ್ಲಿದೆ.


‘ಅಪರಾಜಿತ ಮಹಿಳೆ ಮತ್ತು ಮಕ್ಕಳ ಮಸೂದೆ’ (ಪಶ್ಚಿಮ ಬಂಗಾಳ ಕ್ರಿಮಿನಲ್ ಕಾನೂನು ಮತ್ತು ತಿದ್ದುಪಡಿ ಮಸೂದೆ)–2024 ಅನ್ನು ಸರ್ಕಾರ ಮಂಡಿಸಿದೆ. ಅತ್ಯಾಚಾರ ಮತ್ತು ಲೈಂಗಿಕ ಅಪರಾಧಗಳಿಗೆ ಸಂಬಂಧಿಸಿದ ಹೊಸ ಶಿಕ್ಷೆಗಳನ್ನು ಇದರಲ್ಲಿ ಪರಿಚಯಿಸಲಾಗಿದೆ. ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ಒತ್ತು ನೀಡುವ ಗುರಿಯನ್ನು ಇದು ಹೊಂದಿದೆ.

Join Whatsapp
Exit mobile version