Home ಟಾಪ್ ಸುದ್ದಿಗಳು ಪಶ್ಚಿಮ ಬಂಗಾಳ: ಶಾಲಾ ನೇಮಕಾತಿ ಪ್ರಕ್ರಿಯೆಯನ್ನು ರದ್ದು ಮಾಡಿದ ಹೈಕೋರ್ಟ್

ಪಶ್ಚಿಮ ಬಂಗಾಳ: ಶಾಲಾ ನೇಮಕಾತಿ ಪ್ರಕ್ರಿಯೆಯನ್ನು ರದ್ದು ಮಾಡಿದ ಹೈಕೋರ್ಟ್

ಕೋಲ್ಕತ್ತ: ಪಶ್ಚಿಮ ಬಂಗಾಳದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ನೇಮಕಾತಿಗೆ ನಡೆದಿದ್ದ ರಾಜ್ಯ ಮಟ್ಟದ ಆಯ್ಕೆ ಪರೀಕ್ಷೆ-2016 (ಎಸ್ಎಲ್ಎಸ್ಟಿ) ಅನ್ನು ಅನೂರ್ಜಿತಗೊಳಿಸಿ ಕಲ್ಕತ್ತ ಹೈಕೋರ್ಟ್ ಸೋಮವಾರ ಆದೇಶಿಸಿದೆ.


ನ್ಯಾಯಮೂರ್ತಿಗಳಾದ ದೇಬಂಗ್ಸು ಬಸಾಕ್ ಮತ್ತು ಮೊಹಮ್ಮದ್ ಶಬ್ಬರ್ ರಶೀದಿ ಅವರನ್ನೊಳಗೊಂಡ ವಿಭಾಗೀಯ ಪೀಠವು ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲು ಮತ್ತು ಮೂರು ತಿಂಗಳಲ್ಲಿ ವರದಿಯನ್ನು ಸಲ್ಲಿಸುವಂತೆ ಸಿಬಿಐಗೆ ಸೂಚಿಸಿದೆ.


ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗಕ್ಕೆ ಹೊಸದಾಗಿ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸುವಂತೆ ಪೀಠವು ಸೂಚಿಸಿದೆ.
24,640 ಖಾಲಿ ಹುದ್ದೆಗಳಿಗೆ 23 ಲಕ್ಷ ಅಭ್ಯರ್ಥಿಗಳು SLST-2016 ಪರೀಕ್ಷೆ ಬರೆದಿದ್ದರು.

Join Whatsapp
Exit mobile version