ಪಶ್ಚಿಮ ಬಂಗಾಳ: ರಾಮನವಮಿ ಮೆರವಣಿಗೆ ವೇಳೆ ಹಿಂಸಾಚಾರ; ವಾಹನಗಳಿಗೆ ಬೆಂಕಿ

Prasthutha|

ಹೌರಾ: ರಾಮನವಮಿ ಮೆರವಣಿಗೆ ವೇಳೆ ಪಶ್ಚಿಮ ಬಂಗಾಳದ ಹೌರಾದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ತಂಡವೊಂದು ವಾಹನಗಳಿಗೆ ಬೆಂಕಿಹಚ್ಚಿ ಕಲ್ಲು ತೂರಾಟ ನಡೆಸುತ್ತಾ ದಾಂಧಲೆ ಸೃಷ್ಠಿಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಠಿಯಾಗಿದೆ.

- Advertisement -


ಈ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಈ ಗಲಭೆ ನಡುವೆ ಅಂಗಡಿಗಳನ್ನು ಧ್ವಂಸಗೊಳಿಸಲಾಗಿದೆ.


ಪ್ರಸ್ತುತ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ರಾಮನವಮಿ ಮೆರವಣಿಗೆ ಕಾಜಿಪಾರಾ ಪ್ರದೇಶವನ್ನು ದಾಟುತ್ತಿದ್ದಾಗ ಹಿಂಸಾಚಾರ ಸಂಭವಿಸಿದೆ. ಹಿಂಸಾಚಾರದ ಸಮಯದಲ್ಲಿ ಕೆಲವು ಪೊಲೀಸ್ ವಾಹನಗಳು ಸೇರಿದಂತೆ ಹಲವಾರು ಕಾರುಗಳು ಹಾನಿಗೊಳಗಾಗಿವೆ. ಗುಂಪನ್ನು ಚದುರಿಸಲು ಭದ್ರತಾ ಸಿಬ್ಬಂದಿ ಅಶ್ರುವಾಯು ಶೆಲ್ಗಳನ್ನು ಪ್ರಯೋಗಿಸಿದೆ.

Join Whatsapp