ಕೋಲ್ಕತ್ತ: ಪಶ್ಚಿಮ ಬಂಗಾಳದ ಜಾರ್ ಗ್ರಾಮ್ ಕ್ಷೇತ್ರದ ಕುನಾರ್ ಹೆಂಬ್ರಮ್ ಅವರು ಶನಿವಾರ ಲೋಕಸಭಾ ಸದಸ್ಯತ್ವಕ್ಕೆ ಹಾಗೂ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.
ವೈಯಕ್ತಿಕ ಕಾರಣದಿಂದ ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಹೆಂಬ್ರಮ್ ಅವರು ಮಾಧ್ಯಮದವರಿಗೆ ತಿಳಿಸಿದ್ದಾರೆ.
‘ಈ ಕ್ಷೇತ್ರದಲ್ಲಿ ಬಿಜೆಪಿ ಸೋಲಲಿದೆ. ಹೀಗಾಗಿ ರಾಜೀನಾಮೆ ನೀಡಿದ್ದಾರೆ’ ಎಂದು ಟಿಎಂಸಿ ಎಂ.ಪಿ ಶಾಂತನು ಸೇನ್ ಹೇಳಿದ್ದಾರೆ.