ಪಶ್ಚಿಮ ಬಂಗಾಳ ಸಚಿವ ಜ್ಯೋತಿಪ್ರಿಯೋ ಮಲ್ಲಿಕ್ ಬಂಧಿಸಿದ ಇಡಿ

Prasthutha|

- Advertisement -

ಕೋಲ್ಕತ್ತಾ: ಪಶ್ಚಿಮ ಬಂಗಾಳ ಸಚಿವ ಜ್ಯೋತಿಪ್ರಿಯೋ ಮಲ್ಲಿಕ್ ಜಾರಿ ನಿರ್ದೇಶನಾಲಯ ಬಂಧಿಸಿದೆ. ಪಶ್ಚಿಮ ಬಂಗಾಳದ ಬಹು-ಕೋಟಿ ಪಡಿತರ ವಿತರಣೆ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಿದೆ.

ಸುಮಾರು 17-18 ಗಂಟೆಗಳ ವಿಚಾರಣೆಯ ನಂತರ ಸಚಿವ ಮಲ್ಲಿಕ್ ಅವರನ್ನು ಬಂಧಿಸಲಾಗಿದೆ. ಕೋಲ್ಕತ್ತಾದ ಹೊರವಲಯದಲ್ಲಿರುವ ಸಾಲ್ಟ್ ಲೇಕ್ ಪ್ರದೇಶದಲ್ಲಿರುವ ಸಚಿವರ ಮನೆಯಿಂದ 3.30 ರ ಸುಮಾರಿಗೆ ಕೇಂದ್ರೀಯ ತನಿಖಾ ಸಂಸ್ಥೆಯ ಕಚೇರಿಗೆ ಮಲ್ಲಿಕ್ ಅವರನ್ನು ಕರೆದೊಯ್ಯಲಾಯಿತು ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಮಲ್ಲಿಕ್ ಅವರನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಮತ್ತು ಹೆಚ್ಚಿನ ವಿಚಾರಣೆಗಾಗಿ ಇಡಿ ಅವರನ್ನು ತನ್ನ ಕಸ್ಟಡಿಗೆ ಕೇಳಲಿದೆ ಎಂದು ತಿಳಿದು ಬಂದಿದೆ.

ಬಿಜೆಪಿ ನಾಯಕ ಹಾಗೂ ಟಿಎಂಸಿ ಪಕ್ಷದ ಮಾಜಿ ಸಹೋದ್ಯೋಗಿ ಸುವೇಂದು ಅಧಿಕಾರಿ ಈ ಸಂಚು ರೂಪಿಸಿದ್ದಾರೆ ಎಂದು ಎಂದು ಬಂಧನದ ಬಳಿಕ ಸಚಿವ ಮಲ್ಲಿಕ್ ಅವರು ಪ್ರತಿಕ್ರಿಯಿಸಿದ್ದಾರೆ.

Join Whatsapp