ದಕ್ಷಿಣ ಕನ್ನಡ: ಪಶ್ಚಿಮ ಬಂಗಾಳ ಯುವತಿಯ ಫೇಸ್ಬುಕ್ ಖಾತೆ ದುರ್ಬಳಕೆ | ಕಡಬದ ಯುವಕ ಅರೆಸ್ಟ್

Prasthutha|

ಕಡಬ: ಸಾಮಾಜಿಕ ಜಾಲತಾಣದಲ್ಲಿ ಪಶ್ಚಿಮ ಬಂಗಾಳದ ಯುವತಿಯೋರ್ವಳ ಖಾತೆಯನ್ನು ದುರ್ಬಳಕೆ ಮಾಡಿಕೊಂಡ ಹಿನ್ನೆಲೆಯಲ್ಲಿ ಕಡಬದ ಯುವಕನೋರ್ವನನ್ನು ಪಶ್ಚಿಮ ಬಂಗಾಳ ಪೊಲೀಸರು ಕಡಬಕ್ಕೆ ಆಗಮಿಸಿ ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಮೂಲತಃ ಪಶ್ಚಿಮ ಬಂಗಾಳದ ಯುವತಿಗೆ ಸಂಬಂಧಿಸಿದಂತಹ ಫೇಸ್ಬುಕ್ ಖಾತೆಯನ್ನು ಕಡಬ ತಾಲೂಕಿನ ನೂಜಿಬಾಳ್ತಿಲದ ಯುವಕ, ಪ್ರಸ್ತುತ ಮಂಗಳೂರಿನಲ್ಲಿ ಟ್ರೇಡಿಂಗ್ ವ್ಯವಹಾರ ನಡೆಸುತ್ತಿರುವ ಸಂಜಯ್ ಕೃಷ್ಣ ಎಂಬಾತ ನಕಲಿಸಿರುವ ಬಗ್ಗೆ ಯುವತಿಯು ಪಶ್ಚಿಮ ಬಂಗಾಳದಲ್ಲಿ ಪೊಲೀಸ್ ದೂರು ದಾಖಲಿಸಿದ್ದರು.

- Advertisement -

ಸೈಬರ್ ಕ್ರೈಮ್ ನಡಿ ದೂರು ದಾಖಲಿಸಿಕೊಂಡ ಪಶ್ಚಿಮ ಬಂಗಾಳ ಪೊಲೀಸ್ ಅಧಿಕಾರಿ ಎಸ್.ಕೆ ತಾಜುದ್ದೀನ್ ನೇತೃತ್ವದಲ್ಲಿ, ಪೊಲೀಸರ ತಂಡ ಕಡಬಕ್ಕೆ ಆಗಮಿಸಿ ಕಡಬ ಪೊಲೀಸರ ನೆರವಿನೊಂದಿಗೆ ಆರೋಪಿಯನ್ನು ಬಂಧಿಸಿದ್ದಾರೆ. ಕಾನೂನು ಕ್ರಮಗಳನ್ನು ಪೊರೈಸುವ ಸಲುವಾಗಿ ಆರೋಪಿಯನ್ನು ಪೊಲೀಸರು ಪುತ್ತೂರು ನ್ಯಾಯಾಲಯಕ್ಕೆ ಹಾಜರಪಡಿಸಿ ಪಶ್ಚಿಮ ಬಂಗಾಳಕ್ಕೆ ಕರೆದೊಯ್ದಿದ್ದಾರೆ.

- Advertisement -