ಪಶ್ಚಿಮ ಬಂಗಾಳ| ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ

Prasthutha|

ಕಲ್ಕತ್ತಾ: ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲಿನ ಮೇಲೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಫರಕ್ಕಾ ಬಳಿ ಶನಿವಾರ ತಡರಾತ್ರಿ ಕಲ್ಲು ತೂರಾಟ ನಡೆದಿದೆ.

- Advertisement -

ರೈಲಿನ ಕೋಚ್‌ನ ಕಿಟಕಿ ಗಾಜುಗಳು ಹಾನಿಗೊಳಗಾಗಿವೆ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೂರ್ವ ರೈಲ್ವೆ ಹೇಳಿಕೆಯಲ್ಲಿ ತಿಳಿಸಿದೆ.

ಜನವರಿಯಲ್ಲಿ ಡಾರ್ಜಿಲಿಂಗ್ ಜಿಲ್ಲೆಯ ಫನ್‌ಸಿಡೆವಾ ಪ್ರದೇಶದ ಬಳಿ ಎರಡು ಕೋಚ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಎರಡು ಕಿಟಕಿ ಗಾಜುಗಳು ಹಾನಿಗೊಳಗಾಗಿತ್ತು.

Join Whatsapp