ಅಲ್ಪಸಂಖ್ಯಾತರಿಗೆ ಕಾಂಗ್ರೆಸ್‌ ಘೋಷಿಸಿದ ಭರವಸೆಗಳು ಏನೆಲ್ಲಾ?

Prasthutha|

ನವದೆಹಲಿ: ಇಲ್ಲಿರುವ ಕಾಂಗ್ರೆಸ್‌ ಪ್ರಧಾನ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಅವರು ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಅಲ್ಪಸಂಖ್ಯಾತ ಸಮುದಾಯದವರಿಗೆ ಹಲವು ಘೋಷಣೆಗಳನ್ನು ಮಾಡಲಾಗಿದೆ.

- Advertisement -

ಅಲ್ಪಸಂಖ್ಯಾತರಿಗೆ ಕಾಂಗ್ರೆಸ್‌ ಘೋಷಿಸಿದ ಭರವಸೆಗಳು ಇಲ್ಲಿವೆ.

* ಸಂವಿಧಾನದ 15, 16, 25, 26, 28, 29 ಮತ್ತು 30 ನೇ ವಿಧಿಗಳ ಅಡಿಯಲ್ಲಿ ಧಾರ್ಮಿಕ ಅಲ್ಪಸಂಖ್ಯಾತರಿಗೆ ಖಾತರಿಪಡಿಸಿದ ಹಕ್ಕುಗಳು ಹಾಗೂ ನಂಬಿಕೆಯನ್ನು ಆಚರಿಸುವ ಮೂಲಭೂತ ಹಕ್ಕನ್ನು ನೀಡುತ್ತೇವೆ.

- Advertisement -

* ಶಿಕ್ಷಣ, ಉದ್ಯೋಗ, ವ್ಯಾಪಾರ, ಸೇವೆಗಳು, ಕ್ರೀಡೆ, ಕಲೆ ಮತ್ತು ಇತರ ಕ್ಷೇತ್ರಗಳಲ್ಲಿ ಬೆಳೆಯುತ್ತಿರುವ ಅವಕಾಶಗಳ ಸಂಪೂರ್ಣ ಪ್ರಯೋಜನವನ್ನು ಪಡೆಯಲು ಅಲ್ಪಸಂಖ್ಯಾತರಿಗೆ ಸೇರಿದ ವಿದ್ಯಾರ್ಥಿಗಳು ಮತ್ತು ಯುವಕರನ್ನು ನಾವು ಪ್ರೋತ್ಸಾಹಿಸುತ್ತೇವೆ ಮತ್ತು ಸಹಾಯ ಮಾಡುತ್ತೇವೆ.

* ನಾವು ವಿದೇಶದಲ್ಲಿ ಅಧ್ಯಯನಕ್ಕಾಗಿ ಮೌಲಾನಾ ಆಜಾದ್ ವಿದ್ಯಾರ್ಥಿ ವೇತನವನ್ನು ಮರು ಸ್ಥಾಪಿಸುತ್ತೇವೆ ಮತ್ತು ವಿದ್ಯಾರ್ಥಿವೇತನದ ಸಂಖ್ಯೆಯನ್ನು ಹೆಚ್ಚಿಸುತ್ತೇವೆ.

* ಅಲ್ಪಸಂಖ್ಯಾತರ ಆರ್ಥಿಕ ಸಬಲೀಕರಣವು ಭಾರತವು ತನ್ನ ಸಂಪೂರ್ಣ ಸಾಮರ್ಥ್ಯವನ್ನು ಅರಿತುಕೊಳ್ಳಲು ಅಗತ್ಯವಾದ ಹೆಜ್ಜೆಯಾಗಿದೆ.

* ಅಲ್ಪಸಂಖ್ಯಾತರಿಗೆ ಯಾವುದೇ ತಾರತಮ್ಯವಿಲ್ಲದೆ ಬ್ಯಾಂಕುಗಳು ಸಾಂಸ್ಥಿಕ ಸಾಲವನ್ನು ಒದಗಿಸುವುದನ್ನು ಖಚಿತಪಡಿಸುತ್ತೇವೆ.

* ಅಲ್ಪಸಂಖ್ಯಾತರು ಶಿಕ್ಷಣ, ಆರೋಗ್ಯ, ಸಾರ್ವಜನಿಕ ಉದ್ಯೋಗ, ಲೋಕೋಪಯೋಗಿ ಗುತ್ತಿಗೆಗಳು, ಕೌಶಲ್ಯ ಅಭಿವೃದ್ಧಿ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಾರತಮ್ಯವಿಲ್ಲದೆ ಅವರ ನ್ಯಾಯಯುತ ಪಾಲನ್ನು ಪಡೆಯುವುದನ್ನು ನಾವು ಖಚಿತಪಡಿಸುತ್ತೇವೆ.

* ಪ್ರತಿಯೊಬ್ಬ ನಾಗರಿಕರಂತೆ ಅಲ್ಪಸಂಖ್ಯಾತರಿಗೂ ಉಡುಗೆ, ಆಹಾರ, ಭಾಷೆ ಮತ್ತು ವೈಯಕ್ತಿಕ ಕಾನೂನುಗಳ ಆಯ್ಕೆಯ ಸ್ವಾತಂತ್ರ್ಯವಿದೆ ಎಂದು ಕಾಂಗ್ರೆಸ್ ಖಚಿತಪಡಿಸುತ್ತದೆ.

ಒಟ್ಟಾರೆಯಾಗಿ ಕಾಂಗ್ರೆಸ್‌ ಘೋಷಿಸಿದ ಪ್ರಣಾಳಿಕೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಕೇಂದ್ರ ಸರ್ಕಾರದ ಉಸ್ಯೋಗಗಳಲ್ಲಿ ಸ್ತ್ರೀಯರಿಗೆ ಶೇಕಡಾ 50 ರಷ್ಟು ಮೀಸಲಾತಿ ನೀಡಲು ತೀರ್ಮಾನಿಸಲಾಗಿದೆ. ಆಶಾ, ಬಿಸಿಯೂಟ ಕಾರ್ಯಕರ್ತೆಯ ಸಂಬಳವನ್ನು ದ್ವಿಗುಣದ ಭರವಸೆಯನ್ನು ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ತಿಳಿಸಿದೆ. ಮಹಿಳಾ ಕಾರ್ಮಿಕರ ಹಾಸ್ಟೆಲ್‌ಗಳನ್ನು ಎರಡು ಪಟ್ಟು ಹೆಚ್ಚಿಸಲಾಗುವುದು ಎಂದು ಘೋಷಿಸಿದೆ. ಅಲ್ಲದೆ ಬಡ ಕುಟುಂಬದ ಒಬ್ಬ ಮಹಿಳೆಗೆ ವಾರ್ಷಿಕ 1 ಲಕ್ಷ ರೂ. ನೆರವು ನೀಡಲು ತಮ್ಮ ಪಕ್ಷ ಬದ್ಧವಾಗಿರುವುದಾಗಿ ಘೋಷಿಸಿದೆ.

ದೇಶದ ಬೆನ್ನೆಲೆಬು ಎಂದೇ ಕರಿಸಿಕೊಳ್ಳುವ ರೈತರಿಗೂ ಘೋಷಣಾ ಪತ್ರದಲ್ಲಿ ಸ್ಥಾನ ಸಿಕ್ಕಿದೆ. ತಮ್ಮ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಎಂಎಸ್‌ ಸ್ವಾಮಿನಾಥನ್ ಆಯೋಗದ ಶಿಫಾರಿಸನಂತೆ ಕನಿಷ್ಠ ಬೆಂಬಲ ಬೆಲೆಯ ಕಾನೂನು ನೀಡಲು ಕೈ ಪಕ್ಷ ಪ್ಲ್ಯಾನ್ ಮಾಡಿಕೊಂಡಿದೆ. ಇನ್ನು ರೈತರ ಸಾಲವನ್ನು ಮನ್ನ ಮಾಡಲು ಆಯೋಗ ರಚಿಸಲಾಗುವುದು ಎಂದು ಘೋಷಣೆಯಲ್ಲಿ ತಿಳಿಸಿದ್ದು, ರೈತ ಸ್ನೇಹಿ ಕೃಷಿ ರಫ್ತು ರೂಪಿಸಲಾಗುವುದು ಎಂದು ತಿಳಿಸಿದೆ.

ಶಿಕ್ಷಣ ಪಡೆದ ನಿರುದ್ಯೋಗಿ ಯುವಜನತೆಗೆ ವಾರ್ಷಿಕ 1 ಲಕ್ಷ ರೂ. ಸಹಾಯದನ ನೀಡಲು ತೀರ್ಮಾನಿಸಲಾಗಿದ್ದು, 30 ಲಕ್ಷ ಉದ್ಯೋಗ ಸೃಷ್ಟಿಸುವ ಕನಸನ್ನು ಪ್ರಣಾಳಿಕೆ ಹೊಂದಿದೆ. ಯುವಕರಿಗೆ ಸ್ಟಾರ್ಟಪ್‌ ಅಪ್‌ ಫಂಡ್‌ ಐದು ಸಾವಿರ ನೀಡುವುದಾಗಿ ಕಾಂಗ್ರೆಸ್ ತಿಳಿಸಿದ್ದು, ಗುತ್ತಿಗಿ ಆಧಾರಿತ ಉದ್ಯೋಗಿಗಳ ರಕ್ಷಣೆ ಕಾಂಗ್ರೆಸ್‌ ಬೆಳಕು ಚೆಲ್ಲಿದೆ.



Join Whatsapp