Home ಟಾಪ್ ಸುದ್ದಿಗಳು CAA ಜಾರಿ ಕುರಿತು ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

CAA ಜಾರಿ ಕುರಿತು ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಬೆಂಗಳೂರು: ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯ CAA ಅಧಿಸೂಚನೆ ಹೊರಡಿಸಿದೆ. ಈ ಮಧ್ಯೆ, ಪ್ರತಿಪಕ್ಷಗಳಿಂದ ಸಿಎಎ ಜಾರಿಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.


ಈ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ ಪರಮೇಶ್ವರ್, ಸಿಎಎ ಜಾರಿ ವಿಚಾರವಾಗಿ ಇನ್ನೂ ಏನೂ ಚರ್ಚೆ ಮಾಡಿಲ್ಲ ಎಂದಿದ್ದಾರೆ. ರಾಜ್ಯದಲ್ಲಿ ಸಿಎಎ ಜಾರಿ ವಿಚಾರವಾಗಿ ಇನ್ನೂ ಚರ್ಚೆ ಮಾಡಿಲ್ಲ. ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟ ಸಭೆ ನಡೆಸಿ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತಾರೆ. ಸಿಎಎ ಜಾರಿ ಮಾಡಬೇಕೇ ಅಥವಾ ತಿರಸ್ಕರಿಸಬೇಕೆ ಎಂಬುದನ್ನು ಅವೆಲ್ಲವನ್ನೂ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.

Join Whatsapp
Exit mobile version