ಬೆಂಗಳೂರು: ವಿಜಯೇಂದ್ರರನ್ನ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿರವುದಕ್ಕೆ ಇತ್ತೀಚೆಗೆ ಬಂಡಾಯ ರೀತಿ ಹೇಳಿಕೆ ಕೊಡುತ್ತಿದ್ದ ರೇಣುಕಾಚಾರ್ಯ ಏನು ಹೇಳ್ತಾರೆ ಎಂಬ ಕುತೂಹಲ ಪತ್ರಕರ್ತರಿಗಿತ್ತು. ಅದರಂತೆ ಅವರನ್ನು ಮಾತನಾಡಿಸಿದಾಗ, ಈ ಆಯ್ಕೆ ಈ ನಾಡಿನ ಪ್ರಜ್ಞಾವಂತರ ಅಪೇಕ್ಷೆಯಾಗಿತ್ತು. ಜನರ ಅಪೇಕ್ಷೆ ಈಡೇರಿಸಿದ ರಾಷ್ಟ್ರೀಯ ಅಧ್ಯಕ್ಷ ನಡ್ಡಾ, ಪ್ರಧಾನಿ ಮೋದಿ, ಅಮಿತ್ ಶಾ ಅವರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.
ಮುಂದುವರೆದು ಮಾತನಾಢಿದ ಮಾಜಿ ಸಚಿವ, ವಿಜಯೇಂದ್ರರ ಪಕ್ಷ ಸಂಘಟನೆ ಸಾಮರ್ಥ್ಯ ನೋಡಿ ಈ ಹುದ್ದೆ ಸಿಕ್ಕಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಿಜಯೇಂದ್ರರ ಆಯ್ಕೆ ಪಕ್ಷಕ್ಕೆ ಶಕ್ತಿ ತುಂಬಿದೆ. ಇದು ಮಾಸ್ಟರ್ ಸ್ಟ್ರೋಕ್ ಎಂದಿದ್ದಾರೆ.
ಬಿವೈ ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷರಾಗ್ತಿದ್ದಂತೆ ರಾಜ್ಯಾದ್ಯಂತ ಪಕ್ಷದ ಕಾರ್ಯಕರ್ತರು ದೀಪಾವಳಿ ಹಬ್ಬದಲ್ಲಿ ಪಟಾಕಿ ಹಚ್ಚುವ ಮೂಲಕ ಸಂಭ್ರಮಾಚರಣೆ ಮಾಡಿದ್ದಾರೆ. ಮುಂದೆ ಲೋಕಸಭಾ ಚುನಾವಣೆ ಬರ್ತಿದೆ. ಸಂಘಟನೆ ಚತುರ ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರರ ಸಂಘಟನೆ ನೋಡಿ ಅವರಿ ರಾಜ್ಯಾಧ್ಯಕ್ಷ ಹುದ್ದೆ ಕೊಟ್ಟಿದ್ದಾರೆ. ನಾಳೆ ವಿಜಯೋತ್ಸವ ಆಚರಣೆ ಮಾಡುವಂತೆ ಮನವಿ ಮಾಡುತ್ತೇವೆ ಎಂದಿದ್ದಾರೆ.
ಯಡಿಯೂರಪ್ಪ ಒಂದು ಗುಂಪಿನ ನಾಯಕರಲ್ಲ. ಸಂಘ ಪರಿವಾರ ಅವರ ಹಿಂದಿದೆ. ದಕ್ಷಿಣ ಭಾರತದಲ್ಲಿ ಮೊತ್ತಮೊದಲ ಬಿಜೆಪಿಯನ್ನು ಅಧಿಕಾರಕ್ಕೆ ತಂದ ನಾಯಕ ಯಡಿಯೂರಪ್ಪ. ಇನ್ನಾವ ಸಂಘರ್ಷ ಇಲ್ಲ ಸಾಮರಸ್ಯದಿಂದ ಎಲ್ಲರೂ ಒಂದಾಗಿ ಪಕ್ಷ ಸಂಘಟನೆ ಮಾಡಬೇಕು. ಯಡಿಯೂರಪ್ಪ ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದಾರೆ. ನಾನು ವಯಸ್ಸಿನಲ್ಲಿ ಹಿರಿಯ ಆಗಿರಬಹುದು ಆದ್ರೆ ವಿಜಯೇಂದ್ರ ಅವರಿಗೆ ನಾಯಕತ್ವದ ಅನುಭವವಿದೆ ಎಂದು ಎಂಪಿ ರೇಣುಕಾಚಾರ್ಯ ಮನದುಂಬಿ ನೂತನ ಸಾರಥಿಯನ್ನು ಕೊಂಡಾಡಿದ್ದಾರೆ.