ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಅವರಿಗೆ ಈ ಬಾರಿಯ ಲೋಕಸಭಾ ಚುನಾವಣೆಯ ಟಿಕೆಟ್ ಕೈ ತಪ್ಪಿದೆ. ಈ ಬೆನ್ನಲ್ಲೇ ತಮ್ಮ ವಿರುದ್ಧ ಹರಿದಾಡುತ್ತಿರುವ ಊಹಾಪೋಹಗಳಿಗೆ ಸ್ವತಃ ಅವರೇ ಸ್ಪಷ್ಟನೆಯನ್ನು ಕೊಟ್ಟಿದ್ದಾರೆ.
ತಮ್ಮ ಎಕ್ಸ್ ಖಾತೆಯ ಮೂಲಕ ಸ್ಪಷ್ಟನೆ ನೀಡಿರುವ ಡಿವಿಎಸ್, ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುವುದಾಗಿ ಕೆಲವರು ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದುದು. ಹಾರಿಕೆ ಸುದ್ದಿಯನ್ನು ಹಬ್ಬುವವರು ದೇಶದ್ರೋಹಿಗಳು ಅಂತಾ ಕಿಡಿಕಾರಿದ್ದಾರೆ.ಲೋಕಸಭಾ ಟಿಕೆಟ್ ಸಿಗದ್ದಕ್ಕೆ ಡಿವಿ ಸದಾನಂದ ಗೌಡರು ಕಾಂಗ್ರೆಸ್ ಸೇರುತ್ತಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ಹರಿದಾಡಲು ಆರಂಭವಾಗಿದೆ. ಆದರೆ ಇದೀಗ ಡಿವಿಎಸ್ ಅವರೇ ಸ್ಪಷ್ಟನೆ ಕೊಡುವ ಮೂಲಕ ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿದ್ದಾರೆ.
ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುವುದಾಗಿ ಕೆಲವರು ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದುದು. ಹಾರಿಕೆ ಸುದ್ದಿಯನ್ನು ಹಬ್ಬುವವರು ದೇಶದ್ರೋಹಿಗಳು.
— Sadananda Gowda ( Modi Ka Parivar ) (@DVSadanandGowda) March 13, 2024