Home ಟಾಪ್ ಸುದ್ದಿಗಳು ಜೈಲಿನಿಂದ ಹೊರ ಬಂದ ಸೂರಜ್ ರೇವಣ್ಣ ಹೇಳಿದ್ದೇನು?

ಜೈಲಿನಿಂದ ಹೊರ ಬಂದ ಸೂರಜ್ ರೇವಣ್ಣ ಹೇಳಿದ್ದೇನು?

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರಿಗೆ ಜಾಮೀನು ಸಿಕ್ಕಿದ್ದು, ಇಂದು(ಜುಲೈ 23) ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಜೈಲಿನಿಂದ ಬಿಡುಗಡೆಯಾದ ಕೂಡಲೇ ಸೂರಜ್ ರೇವಣ್ಣ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ” ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ. ಆ ಹೆಸರಿನ ನನ್ನ ಕಾರು ಚಾಲಕ ಅಥವಾ ಅಪ್ತ ಯಾರೂ ಇಲ್ಲ. ನಮ್ಮ ಕುಟುಂಬದ ಮೇಲೆ ಷಡ್ಯಂತ್ರ ನಡೆಸಲಾಗಿದೆ. ಇನ್ನೆರಡು ಮೂರು ದಿನಗಳಲ್ಲಿ ಜನರ ಮುಂದೆ ಬಂದು ಎಲ್ಲಾ ವಿಷಯಗಳನ್ನು ಹೇಳುತ್ತೇನೆ ” ಎಂದಿದ್ದಾರೆ.


ಕುಟುಂಬದ ವಿರುದ್ಧ ಷಡ್ಯಂತ್ರ ಮಾಡಿ ತೇಜೋವಧೆ ಮಾಡಿದ್ದಾರೆ. ತೇಜೋವಧೆ ಮಾಡುವ ದುರುದ್ದೇಶದಿಂದ ಕೇಸ್ ದಾಖಲಿಸಿದ್ದಾರೆ. ನಾವು ಯಾವುದಕ್ಕೂ ಹೆದರಿಕೊಂಡು ಎಲ್ಲಿಗೂ ಓಡಿಹೋಗಲ್ಲ 2-3 ದಿನದಲ್ಲಿ ಎಲ್ಲದಕ್ಕೂ ಸ್ಪಷ್ಟನೆ ಕೊಡ್ತೇನೆ ಎಂದು ಸ್ಪಷ್ಟಪಡಿಸಿದರು.


ತನಿಖಾಧಿಕಾರಿಗಳಿಗೆ ಸಹಕಾರ ನೀಡಿದ್ದೇನೆ. ಕಾನೂನು ನ್ಯಾಯಾಂಗದ ಮೇಲೆ ಸಂಪೂರ್ಣ ವಿಶ್ವಾಸವಿದೆ. ಇದು ಕೇಸ್ ಅಲ್ಲ, ಷಡ್ಯಂತ್ರ ಕುತಂತ್ರ ಎಂದರು.

Join Whatsapp
Exit mobile version