Home ಟಾಪ್ ಸುದ್ದಿಗಳು ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ಬಗ್ಗೆ ವಿಜಯೇಂದ್ರ ಹೇಳಿದ್ದೇನು?

ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ಬಗ್ಗೆ ವಿಜಯೇಂದ್ರ ಹೇಳಿದ್ದೇನು?

ಮೈಸೂರು: ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಅವರು ನನ್ನನ್ನು ಭೇಟಿಯಾಗಿರುವುದು ನಿಜ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.


ಮೈಸೂರಿನಲ್ಲಿ ಮಾತನಾಡಿದ ಅವರು, ಪುತ್ತಿಲ ನನ್ನನ್ನು ಭೇಟಿ ಮಾಡಿದ್ದು ಸತ್ಯ. ಬಿಜೆಪಿ ಸೇರ್ಪಡೆಯಾಗಿ ಎಂದು ಅವರಿಗೆ ಸೂಚಿಸಿದ್ದೇನೆ. ಯಾವುದೇ ಷರತ್ತುಗಳು ಬೇಡ. ಪ್ರಧಾನಿ ಮೋದಿ ನಾಯಕತ್ವಕ್ಕಾಗಿ ಎಲ್ಲರೂ ಒಂದಾಗಬೇಕು ಎಂದು ಹೇಳಿದ್ದೇನೆ ಎಂದು ತಿಳಿಸಿದ್ದಾರೆ.


ಪುತ್ತಿಲ ವಿಚಾರವಾಗಿ ದಕ್ಷಿಣ ಕನ್ನಡದ ಸ್ಥಳೀಯ ಮುಖಂಡರ ಜೊತೆ ಚರ್ಚೆ ಮಾಡುತ್ತೇನೆ. ಎಲ್ಲಾ ಕ್ಷೇತ್ರಕ್ಕೂ ನಮಗೆ ಬಿಜೆಪಿ, ಕಮಲ ಚಿಹ್ನೆಯಷ್ಟೇ ಅಭ್ಯರ್ಥಿ. ಬೇರೆ ಯಾವ ಭಿನ್ನಾಭಿಪ್ರಾಯಗಳೂ ನಮ್ಮ ನಡುವೆ ಇಲ್ಲ ಎಂದು ಅವರು ತಿಳಿಸಿದ್ದಾರೆ.

Join Whatsapp
Exit mobile version