Home ಟಾಪ್ ಸುದ್ದಿಗಳು ಒಬ್ಬ ಕೊಲೆ ಆರೋಪಿಯನ್ನು ಬಂಧಿಸಲಾಗಿಲ್ಲ ಅಂದರೆ ಏನರ್ಥ? ರಾಜ್ಯದಲ್ಲಿ ಗೃಹ ಇಲಾಖೆ ಸತ್ತು ಹೋಗಿದೆಯೇ?: ಕಾಂಗ್ರೆಸ್...

ಒಬ್ಬ ಕೊಲೆ ಆರೋಪಿಯನ್ನು ಬಂಧಿಸಲಾಗಿಲ್ಲ ಅಂದರೆ ಏನರ್ಥ? ರಾಜ್ಯದಲ್ಲಿ ಗೃಹ ಇಲಾಖೆ ಸತ್ತು ಹೋಗಿದೆಯೇ?: ಕಾಂಗ್ರೆಸ್ ಕಿಡಿ

ಬೆಂಗಳೂರು: ಸಾತನೂರಿನಲ್ಲಿ ಜಾನುವಾರು ವ್ಯಾಪಾರಿಯನ್ನು ಹತ್ಯೆಗೈದ ಕೊಲೆಗಡುಕನನ್ನು ಇನ್ನೂ ಬಂಧಿಸಲಿಲ್ಲ, ಆತ ರಾಜಾರೋಷವಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ವಿರೋಧ ಪಕ್ಷದ ನಾಯಕರಿಗೆ ಬೆದರಿಕೆ ಹಾಕುತ್ತಿದ್ದಾನೆ. ಒಬ್ಬ ಕೊಲೆ ಆರೋಪಿಯನ್ನು ಬಂಧಿಸಲಾಗಿಲ್ಲ ಅಂದರೆ ಏನರ್ಥ? ರಾಜ್ಯದಲ್ಲಿ ಗೃಹ ಇಲಾಖೆ ಸತ್ತು ಹೋಗಿದೆಯೇ ಆರಗ ಜ್ಞಾನೇಂದ್ರರವರೇ? ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಪ್ರಶ್ನಿಸಿದೆ.


ಜಾನುವಾರು ವ್ಯಾಪಾರಿಯನ್ನು ಕೊಲೆ ಮಾಡಿದ್ದೂ ಅಲ್ಲದೆ, ವಿರೋಧ ಪಕ್ಷದ ನಾಯಕರಿಗೆ ಬೆದರಿಕೆ ಹಾಕುವ ಕೊಲೆಗಡುಕನ ಧೈರ್ಯದ ಹಿಂದಿನ ಕಾರಣವೇನು? ಗೃಹಸಚಿವರು ಕೊಲೆ ಆರೋಪಿಯನ್ನು ತಮ್ಮದೇ ಮನೆಯಲ್ಲಿಟ್ಟುಕೊಂಡು ವಿಡಿಯೋ ಮೂಲಕ ಸಿದ್ದರಾಮಯ್ಯ ಅವರಿಗೆ ಬೆದರಿಕೆ ಹಾಕಿಸುತ್ತಿದ್ದಾರೆಯೇ? ಆರಗ ಜ್ಞಾನೇಂದ್ರ ಕೊಲೆ ಆರೋಪಿಯ ರಕ್ಷಣೆಗೆ ನಿಂತಿರುವರೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

Join Whatsapp
Exit mobile version