“ಸಿಟಿ” ರವಿಗೂ, ಕಾರು ಆಘಾತಕ್ಕೂ, “ಓಟಿ” ಮದ್ಯಕ್ಕೂ ಏನು ಈ ಜನ್ಮಾಂತರದ ಸಂಬಂಧ: ಕಾಂಗ್ರೆಸ್ ವ್ಯಂಗ್ಯ

Prasthutha|

ಬೆಂಗಳೂರು: ಶಾಸಕರಿಗೆ “ಬಾಂಬೆ ಮಿಠಾಯಿ” ಆಮಿಷ ತೋರಿಸಿ ಆಪರೇಷನ್ ಮಾಡುವ ಬಿಜೆಪಿ ಮತದಾರರಿಗೆ ಹೆಂಡ ತೋರಿಸಿ ಮತ ಪಡೆಯಲು ಮುಂದಾಗಿದೆ. ಚಿಕ್ಕಮಗಳೂರಿನಲ್ಲಿ ಸಿಟಿ ರವಿಗೆ ಸಂಬಂಧಿಸಿದ ಕಾರಿನಲ್ಲಿ “ಓಟಿ ಮದ್ಯ” ಹಾಗೂ ಲಾಂಗ್ ಪತ್ತೆಯಾಗಿದೆ. ಹೆಂಡ ಕುಡಿಸಿ, ಬೆದರಿಸಿ ಮತ ಪಡೆಯುವ ಜವಾಬ್ದಾರಿಯನ್ನು ರೌಡಿ ಮೋರ್ಚಾಗೆ ವಹಿಸಲಾಗಿದೆಯೇ ಬಿಜೆಪಿಯವರೇ? ಎಂದು ಕರ್ನಾಟಕ ಕಾಂಗ್ರೆಸ್ ಪ್ರಶ್ನಿಸಿದೆ.

- Advertisement -


ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಸಿ.ಟಿ.ರವಿ ಬೆಂಬಲಿಗರ ಕಾರು ಅಪಘಾತವಾಗುತ್ತದೆ. ಅದರೊಳಗೆ ಮದ್ಯದ ರಾಶಿ, ಜೊತೆಗೊಂದು ಮಾರಕಾಸ್ತ್ರ ಇರುತ್ತದೆ. ಈ “ಸಿಟಿ” ರವಿಗೂ, ಕಾರು ಆಘಾತಕ್ಕೂ, “ಓಟಿ” ಮದ್ಯಕ್ಕೂ ಏನು ಈ ಜನ್ಮಾಂತರದ ಸಂಬಂಧ! ಧರ್ಮ, ಸಂಸ್ಕೃತಿಯ ಬಗ್ಗೆ ಉದ್ದುದ್ದ ಭಾಷಣ ಬಿಗಿಯುವ ಬಿಜೆಪಿ ನಾಯಕರು ರಾತ್ರಿ ಹೊತ್ತಲ್ಲಿ ಮಾಡುವ ಅಸಲಿ ಧರ್ಮ ರಕ್ಷಣೆಯೇ ಬೇರೆ! ಎಂದು ವ್ಯಂಗ್ಯವಾಡಿದೆ.



Join Whatsapp