ಹೃದಯಾಘಾತ ಪ್ರಕರಣ ಹೆಚ್ಚಳಕ್ಕೆ ಕಾರಣವೇನು?: ಸರ್ಕಾರಕ್ಕೆ ಸಲ್ಲಿಕೆಯಾಯ್ತು ತಜ್ಞರ ವರದಿ

- Advertisement -

ಬೆಂಗಳೂರು: ಹೃಯಾಘಾತದಿಂದ ರಾಜ್ಯದಲ್ಲಿ ಸರಣಿ ಸಾವಿನ ಬೆನ್ನಲ್ಲೇ ಕರ್ನಾಟಕ ಆರೋಗ್ಯ ಇಲಾಖೆ ಎಚ್ಚೆತ್ತಿದೆ. ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ. ರವೀಂದ್ರನಾಥ್ ನೇತೃತ್ವದಲ್ಲಿ ಅಧ್ಯಯನಕ್ಕಾಗಿ ತಾಂತ್ರಿಕ ಸಲಹಾ ಸಮಿತಿ ರಚಿಸಲಾಗಿತ್ತು. ಈ ಸಮಿತಿ ಹಠಾತ್ ಹೃದಯಾಘಾತ ಹೆಚ್ಚಳಕ್ಕೆ ಕಾರಣವೇನು ಎಂಬುದರ ಬಗ್ಗೆ ಅಧ್ಯಯನಕ್ಕಿಳಿದಿತ್ತು. ಹೃದ್ರೋಗಿಗಳನ್ನು ಅಧ್ಯಯಕ್ಕೆ ಒಳಪಡಿಸಿ ವರದಿ ತಯಾರಿಸಿ , ಇದೀಗ ಆ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ.

- Advertisement -

ರಾಜ್ಯದಲ್ಲಿ ಸಂಭವಿಸಿದ ಯುವಕರು ಸೇರಿದಂತೆ ವಿವಿಧ ವಯೋಮಾನದವರ ಹಠಾತ್ ಹೃದಯಾಘಾತ ಸಾವಿನ ಪ್ರಕರಣಗಳಿಗೂ ಮತ್ತು ಕೋವಿಡ್ ಲಸಿಕೆ ಪಡೆದಿರುವುದಕ್ಕೂ ಯಾವುದೇ ಸಂಬಂಧವಿಲ್ಲ. ಕೋವಿಡ್ ಲಸಿಕೆಯ ವ್ಯತಿರಿಕ್ತ ಪರಿಣಾಮಗಳಿಂದ ‘ಹಾರ್ಟ್ ಅಟ್ಯಾಕ್’ಗಳು ಸಂಭವಿಸಿವೆ ಎನ್ನುವುದು ವೈದ್ಯಕೀಯ ತನಿಖೆಯಲ್ಲಿ ದೃಢಪಟ್ಟಿಲ್ಲ ಎಂದು ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ಕೆ.ಎಸ್.ರವೀಂದ್ರನಾಥ್ ನೇತೃತ್ವದ ತಾಂತ್ರಿಕ ಸಮಿತಿಯು ರಾಜ್ಯ ಸರ್ಕಾರಕ್ಕೆ ತನ್ನ ವರದಿ ಸಲ್ಲಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೂರ್ನಾಲ್ಕು ತಿಂಗಳ ಹಿಂದೆ ರಾಜ್ಯದಲ್ಲಿ ದಿಢೀರ್​ ಹೃದಯಾಘಾತಗಳಿಗೆ ಜನರು ಬಲಿಯಾಗುತ್ತಿರುವುದಕ್ಕೆ ಕೋವಿಡ್ ಲಸಿಕೆ ಕಾರಣವಿರಬಹುದೆನ್ನುವ ಸಂಶಯಗಳ ಹಿನ್ನೆಲೆಯಲ್ಲಿ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಆಸ್ಪತ್ರೆ ನಿರ್ದೇಶಕ ಡಾ.ಕೆ.ಎಸ್.ರವೀಂದ್ರನಾಥ್ ನೇತೃತ್ವದಲ್ಲಿ ತಾಂತ್ರಿಕ ಸಮಿತಿ ರಚಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಸೂಚಿಸಿದ್ದರು. ಈ ಬಗ್ಗೆ ತಾಂತ್ರಿಕ ಸಮಿತಿಯು ಸುಮಾರು 250ಕ್ಕೂ ಹೆಚ್ಚು ಹೃದಯಾಘಾತ ಸಾವಿನ ಪ್ರಕರಣಗಳ ಬಗ್ಗೆ ಅಧ್ಯಯನ ನಡೆಸಿ ಆರೋಗ್ಯ ಇಲಾಖೆಗೆ ವರದಿ ನೀಡಿದೆ.

- Advertisement -

ಮೂರು ವಿಭಾಗಗಳಲ್ಲಿ ಹೃದ್ರೋಗಿಗಳ ಅಧ್ಯಯನ
30 ವರ್ಷಕ್ಕಿಂತ ಕಡಿಮೆ ವಯಸ್ಸಿನ 12 ಹೃದ್ರೋಗಿಗಳ ಬಗ್ಗೆ ಅಧ್ಯಯನ ನಡೆಸಲಾಗಿತ್ತು. 31 ರಿಂದ 40 ವಯಸ್ಸಿನ 66 ಹೃದ್ರೋಗಿಗಳ ಬಗ್ಗೆ ಅಧ್ಯಯನ ಮಾಡಲಾಗಿತ್ತು. ಜೊತೆಗೆ 41 ರಿಂದ 45 ವಯಸ್ಸಿನ 172 ಹೃದ್ರೋಗಿಗಳ ಬಗ್ಗೆ ಅಧ್ಯಯನ ಮಾಡಲಾಗಿತ್ತು.

ಹೃದಯಾಘಾತ: ತಜ್ಞರ ವರದಿಯಲ್ಲಿ ಏನಿದೆ?
ತಜ್ಞರ ವರದಿಯ ಪ್ರಕಾರ, ಒಟ್ಟು 251 ಮಂದಿಗೆ ಆರೋಗ್ಯ ತಪಾಸಣೆ ಮಾಡಲಾಗಿದೆ. 218 ಜನ ಪುರುಷರಿದ್ದು, 33 ಮಹಿಳೆಯರನ್ನು ಅಧ್ಯಯನಕ್ಕೆ ಒಳಪಡಿಸಲಾಗಿದೆ. 251 ರೋಗಿಗಳಲ್ಲಿ 87 ಮಂದಿಯಲ್ಲಿ ಮಧುಮೇಹ ಕಂಡುಬಂದಿದೆ. 102 ರೋಗಿಗಳಿಗೆ ಬಿಪಿ, 35 ಕೊಲೆಸ್ಟ್ರಾಲ್ ಇದೆ. 40 ಮಂದಿಗೆ ಹೃದಯ ಸಂಬಂಧಿ ಕಾಯಿಲೆ ಇದೆ. 111 ಮಂದಿ ಧೂಮಪಾನಿಗಳಾಗಿದ್ದಾರೆ. 19 ಮಂದಿಗೆ ಕೊವಿಡ್ ಸೋಂಕೊನ ಹಿನ್ನೆಲೆ ಇತ್ತು. ಇನ್ನುಳಿದ 77 ಮಂದಿಗೆ ಯಾವುದೇ ರೋಗಗಳು ಇರಲಿಲ್ಲ.

ಸದ್ಯ ನ್ಯೂರಾಲಜಿಕಲ್ ಸಮಸ್ಯೆಯ ಅಧ್ಯಯನ ಬಾಕಿ ಇದ್ದು, ನಿಮ್ಹಾನ್ಸ್ ತಜ್ಞರು ವರದಿ ಕೊಟ್ಟ ಬಳಿಕ ಅಂತಿಮ ವರದಿ ಸಲ್ಲಿಕೆಯಾಗಲಿದೆ.

ಕೋವಿಡ್ ಪೂರ್ವದ ಅವಧಿಗೆ ಹೋಲಿಸಿದರೆ, 40 ವರ್ಷದೊಳಗಿನ ರೋಗಿಗಳಲ್ಲಿ ಜೀವನಶೈಲಿಗೆ ಸಂಬಂಧಿಸಿದ ಅಪಾಯಕಾರಿ ಅಂಶಗಳು ಅತ್ಯಧಿಕವಾಗಿರುವುದು ಕಂಡುಬಂದಿದೆ. ಅಧಿಕ ರಕ್ತದೊತ್ತಡ, ಕೊಲೆಸ್ಟ್ರಾಲ್, ಧೂಮಪಾನವು ಹೆಚ್ಚಾಗಿರುವುದು ತಿಳಿದುಬಂದಿದೆ.

- Advertisement -


Must Read

Related Articles