ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಲೋಕಸಭಾ ಚುನಾವಣಾ ಕಣ ರಂಗೇರುತ್ತಿದ್ದು, ಮತ್ತೊಮ್ಮೆ ಚುನಾವಣಾ ಪೂರ್ವ ಮೈತ್ರಿ ಘೋಷಣೆಯಾಗಿದೆ. ಹೈಕಮಾಂಡ್ ಮಟ್ಟದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಹೊಂದಾಣಿಕೆ ನಡೆದಿದ್ದು, ಈ ಮೈತ್ರಿಯನ್ನು ಉಭಯ ಪಕ್ಷಗಳ ನಾಯಕರು ಸ್ವಾಗತಿಸಿದ್ದಾರೆ. 24+4 ಸ್ಥಾನಗಳ ಹಂಚಿಕೆ ನಡೆದಿದ್ದು ಇದನ್ನು ರಾಜ್ಯ ಬಿಜೆಪಿ ನಾಯಕರು ಖಚಿತಪಡಿಸಿದ್ದಾರೆ.
ಮೈತ್ರಿ ವಿಚಾರವಾಗಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ, ಈ ವಿಚಾರವಾಗಿ ನಾನು ಏನು ಹೇಳಲು ಬಯಸುವುದಿಲ್ಲ. ನಮ್ಮ ಮೇಲೆ ಅಷ್ಟಾದರೂ ಪ್ರೀತಿ ಇಟ್ಟಿರುವುದಕ್ಕೆ ಅವರಿಗೆ ಧನ್ಯವಾದ. ಕೊನೆ ಪಕ್ಷ ಅವರಿಗಾದರೂ ಜೆಡಿಎಸ್ ಹುಡುಗಿ ಇಷ್ಟ ಆದಳು ಎಂದು ತಿಳಿಸಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಸಂಬಂಧ ಈವರೆಗೆ ಪಕ್ಷದ ವೇದಿಕೆಯಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಸೆಪ್ಟೆಂಬರ್ 10 ಕ್ಕೆ ಕಾರ್ಯಕರ್ತ ಸಭೆ ಕರೆದಿದ್ದು, ಎಲ್ಲರ ಅಭಿಪ್ರಾಯ ಪಡೆದ ನಂತರವಷ್ಟೇ ನಮ್ಮ ನಾಯಕರು ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.