ಬೆಂಗಳೂರು: ರಾಮಮಂದಿರದ ಮೇಲೆ ವಿಶ್ವ ಹಿಂದೂ ಪರಿಷತ್ ಗೆಯಾವ ಹಕ್ಕಿದೆ? ನಾವೂ ದೇಣಿಗೆ ನೀಡಿದ್ದೇವೆ’ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಹೇಳಿದ್ದಾರೆ.
ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಆಹ್ವಾನವನ್ನು ಕಾಂಗ್ರೆಸ್ ತಿರಸ್ಕರಿಸಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ.
ಭೂ ಹಗರಣದಲ್ಲಿ ಭಾಗಿಯಾಗಿದ್ದ ಚಂಪತ್ ರೈ ಅವರನ್ನು ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರದ ಟ್ರಸ್ಟ್ನ ಮುಖ್ಯಸ್ಥರನ್ನಾಗಿ ಮಾಡಿದ್ದಾರೆ. ಧರ್ಮ ಮತ್ತು ಹಿಂದೂ ನಾಯಕರನ್ನ ಹೊಡೆಯುವ ಇಂತಹ ವ್ಯಕ್ತಿಗೆ ಜವಾಬ್ದಾರಿ ವಹಿಸಿದ್ದಾರೆ. ನಿರ್ಮೋಹಿ ಅಖಾಡದ ಹಕ್ಕನ್ನು ಏಕೆ ಕಸಿದುಕೊಳ್ಳಲಾಗಿದೆ?. ಬಿಜೆಪಿ ಮತ್ತು ವಿಎಚ್ ಪಿ ಇದೀಗ ಬ್ರಿಟಿಷರ ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದೆ ಎಂದು ಕಿಡಿಕಾರಿದ್ದಾರೆ.