ಆತ್ಮೀಯವಾಗಿ ಮಾತನಾಡಿದ್ದನ್ನು ನಕಾರಾತ್ಮಕವಾಗಿ ಬರೆಯಬಾರದು: ಬಸವರಾಜ ರಾಯರಡ್ಡಿ

- Advertisement -

ಕೊಪ್ಪಳ: ವೇದಿಕೆ ಕಾರ್ಯಕ್ರಮಗಳಲ್ಲಿ ಗ್ರಾಮಸ್ಥರ ಜೊತೆ ಆತ್ಮೀಯವಾಗಿ ಮಾತನಾಡಿದ್ದನ್ನು ಮಾಧ್ಯಮಗಳು ನಕಾರಾತ್ಮಕವಾಗಿ ಬರೆಯಬಾರದು ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರೂ ಆದ ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.

- Advertisement -

ಯಲಬುರ್ಗಾ ತಾಲ್ಲೂಕಿನ ಹಿರೇವಂಕಲಕುಂಟಾ ಗ್ರಾಮದಲ್ಲಿ ಸೋಮವಾರ ಬಾಲಕಿಯರ ನೂತನ ಪ್ರೌಢಶಾಲೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಗ್ಯಾರಂಟಿ ‌ಯೋಜನೆಗಳನ್ನು ನಿಲ್ಲಿಸುವ ಬಗ್ಗೆ ಹೇಳಿಕೆ ನೀಡಿಲ್ಲ. ನಮ್ಮ ಸರ್ಕಾರದಲ್ಲಿ ಅನುದಾನದ ಕೊರತೆಯಿಲ್ಲ. ಪಕ್ಷ ನನಗೆ ಎಲ್ಲ ಸ್ಥಾನಮಾನ ನೀಡಿದೆ. ಒಂದು ವೇಳೆ ಹಣಕಾಸು‌ ಸಚಿವರನ್ನಾಗಿ ಮಾಡಿದರೆ ಇನ್ನಷ್ಟು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವೆ ಎಂದರು. ಆರ್ಥಿಕ ಪರಿಸ್ಥಿತಿ ಸುಧಾರಿಸಿದರೆ ಪುರುಷರಿಗೂ ಬಸ್‌ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವೆ ಎಂದರು.

ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗುತ್ತಿವೆ. ನಾನು ಹೇಳಿದ್ದನ್ನು ಮಾಧ್ಯಮಗಳು ತಿದ್ದಿವೆ. ಗ್ಯಾರಂಟಿ ಬಗ್ಗೆ ಪದೇ ಪದೆ ಚರ್ಚೆ ಆಗಲಿ ಎನ್ನುವ ಕಾರಣಕ್ಕಾಗಿಯೇ ನಾನು ಹೇಳುತ್ತೇನೆ. ಮಂಗಳವಾರ ಸುರ್ಜೇವಾಲಾ ಅವರು ಕರೆದಿದ್ದಾರೆ. ಅವರ ಬಳಿಯೂ ಇದೇ ವಿಷಯ ಹೇಳುವೆ ಎಂದು ತಿಳಿಸಿದರು.

- Advertisement -


Must Read

Related Articles