ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷ ಸ್ಥಾನಕ್ಕೆ ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಎ. ಹ್ಯಾರಿಸ್ ಅವರನ್ನು ನೇಮಕ ಮಾಡಿದ್ದಕ್ಕೆ ಆಮ್ ಆದ್ಮಿ ಪಾರ್ಟಿ ವಿರೋಧ ವ್ಯಕ್ತಪಡಿಸಿದೆ. ರಾಜ್ಯದ ರಾಜಧಾನಿಯ ಪ್ರಮುಖ ಕ್ಷೇತ್ರಗಳಲ್ಲಿ ಒಂದಾಗಿರುವ ಶಾಂತಿನಗರ ವಿಧಾನಸಭಾ ಕ್ಷೇತ್ರವನ್ನೇ ಅಭಿವೃದ್ಧಿ ಮಾಡಲಾಗದ ಶಾಸಕ ಎನ್.ಎ. ಹ್ಯಾರಿಸ್ ಅವರಿಗೆ ಇಡೀ ಬೆಂಗಳೂರು ಅಭಿವೃದ್ಧಿ ಮಾಡುವ ಅಧಿಕಾರನ್ನು ಕೊಡಲಾಗಿದೆ. ಬಿಡಿಎ ಅಧ್ಯಕ್ಷರಾಗಲು ಹ್ಯಾರಿಸ್ ಅವರಿಗಿರುವ ಅರ್ಹತೆಯೇನು ಎಂದು ಎಎಪಿ ಅಸಮಾಧಾನ ಹೊರಹಾಕಿದೆ.
ಹಲವು ವರ್ಷಗಳಿಂದ ಪ್ರತಿನಿಧಿಸುತ್ತ ಬಂದಿರುವ ಸ್ವಂತ ಕ್ಷೇತ್ರ ಶಾಂತಿನಗರವನ್ನೇ ಅಭಿವೃದ್ಧಿ ಪಡಿಸಲಾಗದ ಎನ್.ಎ. ಹ್ಯಾರಿಸ್ ಅವರ ಕೈಗೆ ಇಡೀ ಬೆಂಗಳೂರು ಅಭಿವೃದ್ಧಿ ಪಡಿಸುವ ಜವಾಬ್ದಾರಿಯನ್ನು ವಹಿಸಿರುವುದು ಪ್ರಶ್ನಾರ್ಹವಾಗಿದೆ. ಬಿಡಿಎ ಅಧ್ಯಕ್ಷರಾಗಲು ಹ್ಯಾರಿಸ್ ಅವರಿಗಿರುವ ಅರ್ಹತೆಯೇನು ಎಂದು ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಪ್ರಶ್ನಿಸಿದ್ದಾರೆ.