Home ಟಾಪ್ ಸುದ್ದಿಗಳು ಶಾಲಾ ಪಠ್ಯದಲ್ಲಿ RSS ಮುಖ್ಯಸ್ಥ ಹೆಡಗೆವಾರ್ ಭಾಷಣ ಸೇರ್ಪಡೆಯಾದರೆ ತಪ್ಪೇನು: ಸಿ.ಟಿ. ರವಿ

ಶಾಲಾ ಪಠ್ಯದಲ್ಲಿ RSS ಮುಖ್ಯಸ್ಥ ಹೆಡಗೆವಾರ್ ಭಾಷಣ ಸೇರ್ಪಡೆಯಾದರೆ ತಪ್ಪೇನು: ಸಿ.ಟಿ. ರವಿ

ಕಲಬುರಗಿ : ರಾಜ್ಯದ ಶಾಲಾ ಪಠ್ಯಪುಸ್ತಕದಲ್ಲಿ ಆರ್ ಎಸ್ಎಸ್ ಮುಖ್ಯಸ್ಥರಾಗಿದ್ದ ಕೇಶವ ಬಲಿರಾಮ ಹೆಡಗೆವಾರ್ ಅವರ ಭಾಷಣ ಸೇರ್ಪಡೆಯಾದರೆ ತಪ್ಪೇನು. ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ‌ಸಿ.ಟಿ. ರವಿ ಪ್ರಶ್ನಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿಯವರೆಗೆ ಆಳ್ವಿಕೆ ನಡೆಸಿದ್ದ ಕಾಂಗ್ರೆಸ್ ಹಾಗೂ ಎಡಪಂಥೀಯರು ರಾಷ್ಟ್ರೀಯ ವಿಚಾರಧಾರೆಗಳನ್ನು ಮುಚ್ಚಿಟ್ಟಿದ್ದರು. ನಾವು ಈಗ ಮಕ್ಕಳಿಗೆ ತಿಳಿಸುತ್ತಿದ್ದೇವೆ ಎಂದರು. ಆ ಮೂಲಕ ಹೆಡಗೆವಾರ್ ಸೇರಿದಂತೆ ಆರ್ ಎಸ್ ಎಸ್ ಮುಖಂಡರನ್ನು ಪಠ್ಯ ಪುಸ್ತಕದಲ್ಲಿ ಅಳವಡಿಸಿ ಮಕ್ಕಳಿಗೆ ತಿಳಿಸುವ ವಿಚಾರದ ಬಗ್ಗೆ ಪರೋಕ್ಷವಾಗಿ ಸೂಚನೆ ನೀಡಿದರು.

ಇನ್ನು ತ್ರಿಪುರಾದಲ್ಲಿ ಬದಲಾವಣೆಯಾದಂತೆ ಕರ್ನಾಟಕದಲ್ಲಿಯೂ ಮುಖ್ಯಮಂತ್ರಿ ಬದಲಾವಣೆ ‌ಆಗಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ರವಿ, ಮುಂದಿ‌ನ ವಿಧಾನಸಭೆ ಚುನಾವಣೆ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಯಲಿದೆ. ಇದರಲ್ಲಿ ಯಾವುದೇ ಗೊಂದಲ ಬೇಡ. ಸಚಿವ ಸಂಪುಟ ವಿಸ್ತರಣೆ ಮಾಡಬೇಕೋ ಬೇಡವೋ‌ ಎಂಬುದನ್ನು ಅವರೇ ನಿರ್ಧರಿಸುತ್ತಾರೆ ಎಂದರು.

Join Whatsapp
Exit mobile version