ವಿಜಯೇಂದ್ರ ಮುಖ್ಯಮಂತ್ರಿಯಾದರೆ ತಪ್ಪೇನಿದೆ: ಮುರುಗೇಶ್ ನಿರಾಣಿ

Prasthutha|

ಬೆಂಗಳೂರು: ಬಿಜೆಪಿಯಲ್ಲಿ ಮತ್ತು ಲಿಂಗಾಯತ ಧರ್ಮದಲ್ಲಿ ಬಿ.ಎಸ್. ಯಡಿಯೂರಪ್ಪ ನಮ್ಮ ಪ್ರಮುಖ ನಾಯಕರು, ರಾಜ್ಯದಲ್ಲಿ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದವರು. ಅವರ ಮಗ ವಿಜಯೇಂದ್ರ ಮುಖ್ಯಮಂತ್ರಿಯಾದರೆ ತಪ್ಪೇನಿದೆ ಎಂದು ಬೃಹತ್ ಮತ್ತು ಮಧ್ಯಮ ಗಾತ್ರ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಪ್ರಶ್ನಿಸಿದ್ದಾರೆ.

- Advertisement -


ಆ ಮೂಲಕ ವಿಜಯೇಂದ್ರ ಅವರಿಗೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಕೊಟ್ಟು ಸ್ಪರ್ಧಿಸಲು ಅವಕಾಶ ನೀಡಬೇಕೆಂದು ಬ್ಯಾಟಿಂಗ್ ಮಾಡಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಅವರಲ್ಲಿ ನಾಯಕತ್ವ ಗುಣಗಳಿವೆ. ತಂದೆ ಮುಖ್ಯಮಂತ್ರಿಯಾಗಿದ್ದಂತೆ ಅವರು ಕೂಡ ಮುಖ್ಯಮಂತ್ರಿಯಾದರೆ ತಪ್ಪೇನಿದೆ. ರಾಜ್ಯದ ನಾಯಕರೊಬ್ಬರು ದೇಶದ ಪ್ರಧಾನಿಯಾಗಿದ್ದರು. ಅವರ ಮಗ ರಾಜ್ಯದ ಮುಖ್ಯಮಂತ್ರಿಯಾದರು, ಯಾರ ಹಣೆಬರಹದಲ್ಲಿ ಏನು ಬರೆದಿದೆಯೋ ಅದೇ ಆಗುತ್ತದೆ ಎಂದು ಹೇಳಿದರು.


ವಿಜಯೇಂದ್ರ ಅವರಿಗೆ ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ನೀಡುವ ಜವಾಬ್ದಾರಿಗಳ ಬಗ್ಗೆ ವರಿಷ್ಠರು ತೀರ್ಮಾನಿಸುತ್ತಾರೆ. ಮುಖ್ಯಮಂತ್ರಿಯಾಗುವ ಅರ್ಹತೆ ಅವರಲ್ಲಿರುವುದಂತೂ ಸತ್ಯ ಎಂದರು.

Join Whatsapp