Home ಟಾಪ್ ಸುದ್ದಿಗಳು ಫೆಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು?: ಸಚಿವ ಝಮೀರ್ ಅಹ್ಮದ್

ಫೆಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು?: ಸಚಿವ ಝಮೀರ್ ಅಹ್ಮದ್

ಕಲಬುರಗಿ: ಫೆಲೆಸ್ತೀನ್ ಗೆ ಕೇಂದ್ರ ಸರ್ಕಾರವೇ ಬೆಂಬಲ ಸೂಚಿಸಿದೆ. ಹೀಗಿರುವಾಗ ಧ್ವಜ ಹಿಡಿದುಕೊಂಡು ಹೋದರೆ ತಪ್ಪೇನು? ಕೇಂದ್ರ ಸರ್ಕಾರ ಫೆಲೆಸ್ತೀನ್ ಗೆ ಬೆಂಬಲ ಘೋಷಣೆ ಮಾಡಿರುವ ಕಾರಣವೇ ಧ್ವಜ ಹಿಡಿದಿದ್ದಾರೆ, ಇಲ್ಲಾಂದರೆ ಹಿಡಿಯುತ್ತಿರಲಿಲ್ಲ ಎಂದು ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ದೇಶದ ಬಗ್ಗೆ ಘೋಷಣೆ ಕೂಗಿದರೆ ಅದು ತಪ್ಪು. ಹಾಗೆ ಮಾಡಿದವರು ದೇಶದ್ರೋಹಿಗಳು. ಅಂಥವರನ್ನು ಗಲ್ಲಿಗೇರಿಸಬೇಕು. ಹಾಗೆಂದು ಧ್ವಜ ಹಿಡಿದರೆ ತಪ್ಪಿಲ್ಲ ಎಂದು ಹೇಳಿದರು.


ಬಿಜೆಪಿಯವರು ಹಿಂದೂ ಮುಸ್ಲಿಂ ಜಗಳ ತಂದಿಟ್ಟು ಮತ ಕೇಳುತ್ತಾರೆ. ಆದರೆ, ನಾವು ಹಾಗಲ್ಲ. ಮಾಡಿದ ಅಭಿವೃದ್ಧಿ ಕೆಲಸ ಮುಂದಿಟ್ಟುಕೊಂಡು ಮತ ಯಾಚಿಸುತ್ತೇವೆ ಎಂದು ಅವರು ಹೇಳಿದ್ದಾರೆ.


ಸಿಎಂ ರಾಜೀನಾಮೆ ನೀಡುತ್ತಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿರುವುದಕ್ಕೆ ಪ್ರತಿಕ್ರಿಯಿಸಿ, ವಿಜಯೇಂದ್ರರಂತಹ ನೂರು ಜನ ಬಂದರೂ ಏನೂ ಮಾಡಲು ಆಗಲ್ಲ. ಕುಮಾರಸ್ವಾಮಿ ಅವರಂಥ ಇನ್ನೂರು ಜನ ಬಂದರೂ ಏನೂ ಆಗಲ್ಲ. ಸಿದ್ದರಾಮಯ್ಯ ಹುಲಿ ಇದ್ದಂತೆ, ಅವರನ್ನು ಏನೂ ಮಾಡಲು ಆಗುವುದಿಲ್ಲ ಎಂದರು.

Join Whatsapp
Exit mobile version