ಬ್ರಾಹ್ಮಣ ಸಮಾಜದ ವಿಚಾರ ಬಂದರೆ ನಾವೆಲ್ಲರೂ ಒಗ್ಗೂಡಿ ಹೋರಾಟ ಮಾಡಬೇಕು: ಸಚಿವ ದಿನೇಶ್ ಗುಂಡೂರಾವ್

Prasthutha|

ಬೆಂಗಳೂರು: ಬ್ರಾಹ್ಮಣ ಸಮಾಜದ ವಿಚಾರ ಬಂದರೆ
ನಾವೆಲ್ಲರೂ ಒಗ್ಗೂಡಿ ಹೋರಾಟ ಮಾಡಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

- Advertisement -


ಈ ಬಾರಿ ಚುನಾಯಿತರಾದ ಬ್ರಾಹ್ಮಣ ಸಮುದಾಯದ ಶಾಸಕರಿಗೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ವತಿಯಿಂದ ಬೆಂಗಳೂರಿನ ಬಸವನಗುಡಿಯ ಎಪಿಎಸ್ ಕಾಲೇಜು ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು,
ಬ್ರಾಹ್ಮಣ ಸಮುದಾಯದಲ್ಲಿ ಹಲವು ಮಂದಿ ಸಾಧಕರಿದ್ದಾರೆ. ಹೀಗಾಗಿ, ಎಲ್ಲರೂ ಜತೆಗೂಡಿ ಬ್ರಾಹ್ಮಣ ಸಮುದಾಯದ ಅಭಿವೃದ್ಧಿಗೆ ಕೈಜೋಡಿಸಬೇಕು. ಇನ್ನೂ ನಮ್ಮ ಸರಕಾರ ಐದು ವರ್ಷ ಇರುತ್ತದೆ. ಬ್ರಾಹ್ಮಣ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷದ ಸರಕಾರ ಸಹಾಯ, ಸಹಕಾರ ನೀಡಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಆರ್.ವಿ.ದೇಶಪಾಂಡೆ,
ರವಿಸುಬ್ರಮಣ್ಯ, ಸಿ.ಕೆ.ರಾಮಮೂರ್ತಿ, ಉದಯ್
ಗರುಡಾಚಾರ್ ಸೇರಿದಂತೆ ಪ್ರಮುಖರನ್ನು
ಸನ್ಮಾನಿಸಲಾಯಿತು.