ಈಗ ಜೆಡಿಎಸ್‌ ಎಲ್ಲಿದೆ?: ಡಿಕೆ‌ ಶಿವಕುಮಾರ್

Prasthutha|

ಬೆಂಗಳೂರು: ರಾಜ್ಯದ ಐದಾರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ಗೆ ನೇರ ಸ್ಪರ್ಧೆ ಇತ್ತು. ಆದರೆ ಈಗ ಜೆಡಿಎಸ್‌ ಎಲ್ಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರಶ್ನಿಸಿದ್ದಾರೆ.

- Advertisement -

ಸುದ್ದಿಗಾರರ ಜತೆ ಮಾತನಾಡಿದ ಅವರು, ದೇವೇಗೌಡರ‌ ಕುಟುಂಬವೇ ಬಿಜೆಪಿ ಸೇರುತ್ತಿದೆ. ಪಾಪ, ಕಾರ್ಯಕರ್ತರು “ಹೀಗಾದರೆ ನಮ್ಮ ಗತಿ ಏನು” ಎಂದು ನಮ್ಮ ಪಕ್ಷದ ನಾಯಕರನ್ನು ಸಂಪರ್ಕಿಸುತ್ತಿದ್ದಾರೆ ಎಂದರು.

ಬಿಜೆಪಿ, ಜೆಡಿಎಸ್‌ ನಾಯಕರು ನಮ್ಮ ವಿರುದ್ಧ ಹೋರಾಟ ಮಾಡಿದವರು. ಅವರೂ ಮುಂದಿನ ರಾಜಕೀಯ ಭವಿಷ್ಯವನ್ನು ನೋಡುತ್ತಾರಲ್ಲವೇ? ಎರಡೂ ಪಕ್ಷಗಳ ಸಾಕಷ್ಟು ಜನ ಕಾರ್ಯಕರ್ತರು ಕಾಂಗ್ರೆಸ್‌ ಸೇರಲು ಉತ್ಸುಕರಾಗಿದ್ದಾರೆ. ಸ್ಥಳೀಯ ಮಟ್ಟದಲ್ಲಿ ಪಕ್ಷ ಸೇರ್ಪಡೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

- Advertisement -

ಡಿ.ಕೆ.ಸುರೇಶ್‌ಗೆ ತಕ್ಕಪಾಠ ಕಲಿಸುತ್ತೇವೆ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಡಿಸಿಎಂರನ್ನು ಕೇಳಿದಾಗ, ಮೊದಲು ಅವರ ಪಕ್ಷದ ಪರಿಸ್ಥಿತಿ ಬಗ್ಗೆ ಮಾತನಾಡಲಿ. ದಳ ಇದೆಯೋ? ಇಲ್ಲವೋ ಎಂಬುದರ ಬಗ್ಗೆ ಮೊದಲು ಹೇಳಲಿ. ಅನಂತರ ಪ್ರಬಲ ಅಭ್ಯರ್ಥಿ ಬಗ್ಗೆ ಮಾತನಾಡಲಿ ಎಂದರು.

Join Whatsapp