ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರು ಈ ಫೋಟೋದಲ್ಲಿ ಎಲ್ಲಿದ್ದಾರೆ?: ಕಾಂಗ್ರೆಸ್ ಪ್ರಶ್ನೆ

Prasthutha|

ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾತುಕತೆ ಸಂದರ್ಭ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಇರಲಿಲ್ಲ. ಇದನ್ನೇ ಮುಂದಿಟ್ಟುಕೊಂಡು ಕಾಂಗ್ರೆಸ್ ಟ್ವೀಟ್ ಮೂಲಕ ಜೆಡಿಎಸ್ ಅನ್ನು ಪ್ರಶ್ನಿಸಿದೆ.

- Advertisement -


ಜೆಡಿಎಸ್ ಪಕ್ಷಕ್ಕೆ ರಾಜ್ಯಾಧ್ಯಕ್ಷ ಅಂತ ಒಬ್ಬರಿದ್ದರು ಈ ಚಿತ್ರದಲ್ಲಿ ಅವರೆಲ್ಲಿದ್ದಾರೆ? ಪಕ್ಷದ ಪ್ರಮುಖ ನಿರ್ಧಾರವೊಂದನ್ನು ತೆಗೆದುಕೊಳ್ಳುವುದಕ್ಕೆ ರಾಜ್ಯಾಧ್ಯಕ್ಷರ ಅಭಿಪ್ರಾಯ ಬೇಕಿಲ್ಲವೇ? ಅವರ ಉಪಸ್ಥಿತಿ ಬೇಕಿಲ್ಲವೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.


ಅಲ್ಲದೆ, ರಾಜ್ಯಾಧ್ಯಕ್ಷ ಹುದ್ದೆ ಎನ್ನುವುದು ಕುಮಾರಸ್ವಾಮಿಯವರ ಕುಟುಂಬ ಕೈ ಒರೆಸಲು ಇಟ್ಟುಕೊಂಡಿರುವ ಟಿಶ್ಯೂ ಪೇಪರ್ ಮಾತ್ರವೇ? ವಿಮಾನದ ಟಿಕೆಟ್ ಬುಕ್ ಮಾಡಲೊಬ್ಬರು, ಹೋಟೆಲ್ ರೂಮ್ ಬುಕ್ ಮಾಡಲೊಬ್ಬರು ಹಾಗೂ ತಮ್ಮ ಪುತ್ರ ಜೊತೆಗಿದ್ದರೆ ಸಾಕೇ? ಎಂದು ಪ್ರಶ್ನಿಸಿದೆ.

- Advertisement -

Join Whatsapp