ಬೆಂಗಳೂರು: ರಾಹುಲ್ ಗಾಂಧಿ ಅವರು ಬೆಂಗಳೂರಿಗೆ ಬಂದು ನ್ಯಾಯಾಲಯದ ಮುಂದೆ ಹಾಜರಾದರು. ಅವರ ವಿರುದ್ಧ ಕೇಸು ಹಾಕಿರುವುದು ಯಾವ ದ್ವೇಷ ರಾಜಕಾರಣ? ಬಿಜೆಪಿಯ ವಿರುದ್ಧದ ಜಾಹೀರಾತಿಗೂ ರಾಹುಲ್ ಗಾಂಧಿ ಅವರಿಗೂ ಏನು ಸಂಬಂಧ? ದ್ವೇಷ ರಾಜಕಾರಣ ಮಾಡುತ್ತಿರುವವರು ಬಿಜೆಪಿಯವರು. ಆ ಜಾಹೀರಾತು ಕೊಟ್ಟಿದ್ದು ರಾಹುಲ್ ಗಾಂಧಿ ಅವರೇ? ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾ ಅಥವಾ ಕೆಪಿಸಿಸಿ ಅಧ್ಯಕ್ಷರಾ ಎಂದು ಉಪ ಮುಖ್ಯಮಂತ್ರಿ ಬಿಜೆಪಿಯ ದ್ವೇಷ ರಾಜಕೀಯ ಹೇಳಿಕೆಗೆ ಕಿಡಿಗಾರಿದ್ದಾರೆ.
ಕಬ್ಬನ್ ಪಾರ್ಕಿನ ಬಾಲಭವನ ಬಳಿ ಮಾಧ್ಯಮಗಳು, ಯಡಿಯೂರಪ್ಪ ಅವರ ವಿರುದ್ಧ ಕಾನೂನು ಪ್ರಕ್ರಿಯೆ ದ್ವೇಷದ ರಾಜಕಾರಣ. ರಾಹುಲ್ ಗಾಂಧಿ ಅವರು ಬಂದ ನಂತರ ಈ ಬೆಳವಣಿಗೆ ನಡೆಯುತ್ತಿದೆ ಎಂದು ಬಿಜೆಪಿಯ ಟೀಕೆ ಬಗ್ಗೆ ಕೇಳಿದಕ್ಕೆ ಅವರು ಪ್ರತಿಕ್ರಿಯಿಸಿದ್ದಾರೆ.
ನಾನು ಆ ಪ್ರಕರಣದ ಬಗ್ಗೆ ಹೆಚ್ಚು ಮಾಹಿತಿ ಪಡೆದಿಲ್ಲ. ಕಾಂಗ್ರೆಸ್ ಪಕ್ಷ ಯಾರ ಮೇಲೂ ದ್ವೇಷ ಮಾಡುವುದಿಲ್ಲ. ದ್ವೇಷ ರಾಜಕಾರಣದ ಬಗ್ಗೆ ನಾನು ಮಾತನಾಡಿದರೆ ವಿಚಾರ ಎಲ್ಲೆಲ್ಲೋ ಹೋಗುತ್ತದೆ. ಈ ವಿಚಾರದಲ್ಲಿ ನನಗೂ ಅಯ್ಯೋ ಎನಿಸುತ್ತದೆ. ಇಂತಹ ಕಠಿಣ ಪರಿಸ್ಥಿತಿಯನ್ನು ನಾವು ಅನುಭವಿಸಿದ್ದೇವೆ.
ಬಿಜೆಪಿ ಶಾಸಕ ಯತ್ನಾಳ್ ಹೇಳಿಕೆ ಹಾಗೂ ಮಾಧ್ಯಮಗಳ ವರದಿ ಆಧರಿಸಿ ಆ ಜಾಹೀರಾತನ್ನು ಕೆಪಿಸಿಸಿ ವತಿಯಿಂದ ನಾನು ಕೊಟಿದ್ದೆ. ನಮ್ಮ ಮೇಲೆ ಕೇಸ್ ಹಾಕಿದ್ದಾರೆ. ಈ ಕೇಸ್ ಹಾಕಿಸುವಾಗ ವಿಜಯೇಂದ್ರಗೆ ಸಾಮಾನ್ಯ ಪ್ರಜ್ಞೆ ಇರಲಿಲ್ಲವೇ? ನಾವು ಅವರಂತೆ ನೀಚ ರಾಜಕಾರಣ ಮಾಡುವುದಿಲ್ಲ. ಬಿಜೆಪಿಯವರು ಸದಾ ದ್ವೇಷ ಮಾಡುತ್ತಾರೆ ಹೊರತು ಕಾಂಗ್ರೆಸ್ ಪಕ್ಷವಲ್ಲ ಎಂದು ತಿಳಿಸಿದರು.
ದರ್ಶನ್ ಅವರ ಪ್ರಕರಣದಲ್ಲಿ ಪ್ರಭಾವಿಗಳ ಒತ್ತಡವಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, ಈ ಪ್ರಕರಣದಲ್ಲಿ ಯಾವುದೇ ಒತ್ತಡವಿಲ್ಲ. ಈ ಬಗ್ಗೆ ನಾನು ವಿಚಾರಿಸಿದ್ದೇನೆ. ಪ್ರಕರಣದಲ್ಲಿ 13 ಆರೋಪಿಗಳಿದ್ದು, ಮಾಧ್ಯಮಗಳು ಬೆಳಗ್ಗೆಯಿಂದ ಸಂಜೆವರೆಗೂ ಕ್ಯಾಮೆರಾ ಹಿಡಿದಿರುತ್ತೀರಿ, ಪೊಲೀಸರಿಗೆ ಸ್ವತಂತ್ರವಾಗಿ ವಿಚಾರಣೆ ನಡೆಸಲು ಆಗುತ್ತಿಲ್ಲ ಎಂದು ಅವರು ಶಾಮಿಯಾನ ಹಾಕಿಕೊಂಡಿದ್ದಾರೆ. ಈ ಪ್ರಕರಣದ ಪೊಲೀಸ್ ತನಿಖೆಯಲ್ಲಿ ಗೃಹ ಸಚಿವರಿಂದ ಹಿಡಿದು ಯಾರೊಬ್ಬರೂ ಹಸ್ತಕ್ಷೇಪ ಮಾಡಿಲ್ಲ ಎಂದು ತಿಳಿಸಿದರು.