2018ರಲ್ಲಿ ಯಾವ ಅನ್ನ ಹಳಸಿತ್ತು?: ದಿನೇಶ್ ಗುಂಡೂರಾವ್ ವಿರುದ್ಧ ಹೆಚ್‌ಡಿಕೆ ಕಿಡಿ

Prasthutha|

ಬೆಂಗಳೂರು: ಕಾಂಗ್ರೆಸ್ ಪಕ್ಷದ ಯಾರೋ ಒಬ್ಬರು ನಾಯಕರು ನಾಯಿ ಹಸಿದಿತ್ತು, ಅನ್ನ ಹಳಸಿತ್ತು ಅಂತ ಹೇಳಿದ್ದಾರೆ. 2018ರಲ್ಲಿ ಅವತ್ತು ಯಾವ ಅನ್ನ ಹಳಸಿತ್ತು? ಯಾವ ನಾಯಿ ಹಸಿದಿತ್ತು ಎನ್ನುವುದನ್ನು ನೆನಪು ಮಾಡಿಕೊಳ್ಳಬೇಕು. ಅವತ್ತು ನಮ್ಮ ಮನೆಗೆ ಬಂದಿದ್ದವರು ಯಾರು? ಎಂದು ಸಚಿವ ದಿನೇಶ್ ಗುಂಡೂರಾವ್‌ಗೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ.

- Advertisement -

ರಾಜ್ಯದ ಪರಿಸ್ಥಿತಿಯನ್ನು ನೋಡುತ್ತಿದ್ದೇನೆ. ಅಮಲಿನಲ್ಲಿ ನಾವು ಏನೋ ಮಾಡಿಬಿಟ್ಟಿದ್ದೇವೆ. ಜೆಡಿಎಸ್ ಪಕ್ಷವನ್ನು ಮುಗಿಸಿಬಿಟ್ಟಿದ್ದೇವೆ. ಅಲ್ಲಿಂದ ಇಲ್ಲಿಂದ ಕರೆದುಕೊಂಡು ಬರುತ್ತಿದ್ದೇವೆ ಎಂದು ಬೀಗುತ್ತಿದ್ದಾರೆ. ಅದಕ್ಕೆಲ್ಲಾ ಉತ್ತರ ಕೊಡುತ್ತೇವೆ ಎಂದು ಹೆಚ್‌ಡಿಕೆ ಹೇಳಿದರು.

ರಾಜಕಾರಣದಲ್ಲಿ ನಿರಾಶೆ, ಹತಾಶೆ ಎನ್ನುವುದು ಬರಲ್ಲ. ಡೆಸ್ಪರೇಟ್ ಅನ್ನುವ ಪದ ರಾಜಕಾರಣದಲ್ಲಿ ಬರಲ್ಲ. ರಾಜಕಾರಣದ ಡಿಕ್ಷನರಿಯಲ್ಲೇ ಆ ಪದ ಇಲ್ಲ. ಈಗ ಕಾಂಗ್ರೆಸ್ ಪಕ್ಷಕ್ಕೆ ಡೆಸ್ಪರೇಟ್ ಆಗುತ್ತದೆ. ಹೊರನೋಟಕ್ಕೆ ಅವರು ಏನು ಬೇಕಾದರೂ ಹೇಳಬಹುದು. ಆದರೆ ಒಳಗಡೆ ಏನಿದೆ, ಅವರ ಶಕ್ತಿ ಏನಿದೆ ಎನ್ನುವುದು ನನಗೂ ಗೊತ್ತಿದೆ ಎಂದು ಟಾಂಗ್ ನೀಡಿದರು.

- Advertisement -

ರಾಜಕಾರಣದಲ್ಲಿ ಸದಾಕಾಲ ಒಂದೇ ರೀತಿ ಇರಲ್ಲ. ರಾಜಕಾರಣದ ಚಕ್ರ ಉರುಳುತ್ತಿರುತ್ತದೆ. ಅವರು ಏನು ಸಾಧನೆ ಮಾಡಿದ್ದಾರೆ ಅಂತ ಜನ ಸೀಟು ಕೊಡುತ್ತಾರೆ? ಲೂಟಿ ಮಾಡಿದ್ದಾರೆ, ಆ ಹಣದಲ್ಲಿ ಜನರನ್ನು ಕೊಂಡುಕೊಳ್ಳಬಹುದು ಅಂದುಕೊಂಡಿದ್ದಾರೆ. ಅದು ಸಾಧ್ಯ ಆಗಲ್ಲ ಎಂದು ತಿರುಗೇಟು ನೀಡಿದರು

Join Whatsapp