Home ಟಾಪ್ ಸುದ್ದಿಗಳು ನಾಳೆ ಎರಡೂ ಸದನಗಳಲ್ಲಿ ಕಡ್ಡಾಯ ಹಾಜರಾತಿಗೆ ಬಿಜೆಪಿ ಸಂಸದರಿಗೆ ವಿಪ್: ಕುತೂಹಲ ಕೆರಳಿಸಿದ ಕೇಂದ್ರದ ನಡೆ!

ನಾಳೆ ಎರಡೂ ಸದನಗಳಲ್ಲಿ ಕಡ್ಡಾಯ ಹಾಜರಾತಿಗೆ ಬಿಜೆಪಿ ಸಂಸದರಿಗೆ ವಿಪ್: ಕುತೂಹಲ ಕೆರಳಿಸಿದ ಕೇಂದ್ರದ ನಡೆ!

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ನಾಳಿನ ಲೋಕಸಭೆ ಮತ್ತು ರಾಜ್ಯಸಭೆ ಕಲಾಪಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಬಿಜೆಪಿ ಸಂಸದರು ಮತ್ತು ರಾಜ್ಯಸಭಾ ಸದಸ್ಯರಿಗೆ ವಿಪ್ ಜಾರಿ ಮಾಡಲಾಗಿದೆ.

ಇಂದಿಗೆ ಅಂತ್ಯವಾಗಬೇಕಿದ್ದ ಬಜೆಟ್ ಅಧಿವೇಶನವನ್ನು ಕೇಂದ್ರ ಸರ್ಕಾರ ಒಂದು ದಿನ ವಿಸ್ತರಣೆ ಮಾಡಗಿದ್ದು, ಇದೀಗ ಕಲಾಪದ ಅಂತಿಮ ದಿನ ತನ್ನೆಲ್ಲಾ ಸಂಸದರು ಮತ್ತು ರಾಜ್ಯಸಭಾ ಸದಸ್ಯರು ಕಡ್ಡಾಯವಾಗಿ ಕಲಾಪದಲ್ಲಿ ಹಾಜರಿರುವಂತೆ ವಿಪ್ ಜಾರಿಗೊಳಿಸಿದ ಕೇಂದ್ರ ಸರ್ಕಾರದ ನಡೆ ಕುತೂಹಲ ಕೆರಳಿಸುವಂತೆ ಮಾಡಿದೆ. 

ಬಜೆಟ್ ಅಧಿವೇಶನದ ಕೊನೆಯ ದಿನ ಅಂದರೆ ನಾಳೆ ಫೆಬ್ರವರಿ 10 ಕೆಲ ಪ್ರಮುಖ ಶಾಸಕಾಂಗ ವ್ಯವಹಾರಗಳ ಕುರಿತು ಸದನದಲ್ಲಿ ಚರ್ಚೆ ನಡೆಸಲಾಗುತ್ತದೆ. ಹೀಗಾಗಿ ಎಲ್ಲರು ಕಡ್ಡಾವಾಗಿ ಹಾಜರಾತಿ ಇರಬೇಕು ಎಂದು ಬಿಜೆಪಿ ಮುಖ್ಯ ಸಚೇತಕ ಲಕ್ಷ್ಮೀಕಾಂತ್ ಬಾಜ್ಪೇಯ್ ವಿಪ್ ಹೊರಡಿಸಿದ್ದಾರೆ.

Join Whatsapp
Exit mobile version