ನಿರ್ಮಾಣ ಹಂತದ ಕಾಮಗಾರಿ ವೇಳೆ ನಿಗೂಢ ಸ್ಫೋಟ: ಮೂವರನ್ನು ಬಂಧಿಸಿದ ವೈಟ್ ಫೀಲ್ಡ್ ಪೊಲೀಸರು

Prasthutha|

ಬೆಂಗಳೂರು: ಕಾಮಗಾರಿ ವೇಳೆ ಅಕ್ರಮವಾಗಿ ಜಿಲೆಟಿನ್​ ಸ್ಫೋಟಿಸಿದ್ದ ಮೂವರನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಮಂಜುನಾಥ ರೆಡ್ಡಿ, ಲೋಕೇಶ್, ಸಾಕೇತ್ ಬಂಧಿತರು.

- Advertisement -

ಈ ಕುರಿತು ವೈಟ್ ಫೀಲ್ಡ್ ವಿಭಾಗ ಡಿಸಿಪಿ ಎಸ್.ಗಿರೀಶ್​ ಖಾಸಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದು, ಜೂನ್​ 6ರಂದು ರಾತ್ರಿ 11.30ರ ಸುಮಾರಿಗೆ ನಿಗೂಢ ಸ್ಫೋಟವಾಗಿತ್ತು. ಶ್ರೀನಿವಾಸ, ಮಣಿಕಂಠ ಎಂಬವರು ಗಂಭೀರವಾಗಿ ಗಾಯಗೊಂಡಿದ್ದರು. ಇಬ್ಬರು ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದರು.

ತಲೆಮರೆಸಿಕೊಂಡಿರುವ ಇತರೆ ಆರೋಪಿಗಳಿಗಾಗಿ ಹುಡುಕಾಟ ನಡೆದಿದೆ. ವೈಟ್​ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.



Join Whatsapp