ಬೆಂಗಳೂರು: ಕಾಮಗಾರಿ ವೇಳೆ ಅಕ್ರಮವಾಗಿ ಜಿಲೆಟಿನ್ ಸ್ಫೋಟಿಸಿದ್ದ ಮೂವರನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಮಂಜುನಾಥ ರೆಡ್ಡಿ, ಲೋಕೇಶ್, ಸಾಕೇತ್ ಬಂಧಿತರು.
ಈ ಕುರಿತು ವೈಟ್ ಫೀಲ್ಡ್ ವಿಭಾಗ ಡಿಸಿಪಿ ಎಸ್.ಗಿರೀಶ್ ಖಾಸಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದು, ಜೂನ್ 6ರಂದು ರಾತ್ರಿ 11.30ರ ಸುಮಾರಿಗೆ ನಿಗೂಢ ಸ್ಫೋಟವಾಗಿತ್ತು. ಶ್ರೀನಿವಾಸ, ಮಣಿಕಂಠ ಎಂಬವರು ಗಂಭೀರವಾಗಿ ಗಾಯಗೊಂಡಿದ್ದರು. ಇಬ್ಬರು ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದರು.
ತಲೆಮರೆಸಿಕೊಂಡಿರುವ ಇತರೆ ಆರೋಪಿಗಳಿಗಾಗಿ ಹುಡುಕಾಟ ನಡೆದಿದೆ. ವೈಟ್ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.