ವಿಟ್ಲ: ಸ್ಕೂಟರ್ ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿ: ರಿಕ್ಷಾ ಪ್ರಯಾಣಿಕ ಸ್ಥಳದಲ್ಲೇ ಮೃತ್ಯು

Prasthutha|

ವಿಟ್ಲ: ಪೆರುವಾಯಿಬೆರಿಪದವು ರಸ್ತೆಯಲ್ಲಿ ಸ್ಕೂಟರ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ್ದು, ರಿಕ್ಷಾದಲ್ಲಿದ್ದ ಮೂವರ ಪೈಕಿ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

- Advertisement -

ಪೆರುವಾಯಿಬೆರಿಪದವು ರಸ್ತೆಯಲ್ಲಿ ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಈ ಅಪಘಾತ ಸಂಭವಿಸಿದೆ. ಸ್ಕೂಟಿ ಮತ್ತು ಆಟೋರಿಕ್ಷಾ ಮುಖಾಮುಖಿ ಡಿಕ್ಕಿ ಹೊಡೆದಿದ್ದು ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡಿದ್ದ ರಿಕ್ಷಾದಲ್ಲಿದ್ದ ಬಾಯಾರು ಪೆರುವೋಡಿ ನಿವಾಸಿ ನಾಗೇಶ್ ಭಟ್ (47) ಎಂಬವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನು ಉಳಿದವರು ಗಂಭೀರ ಗಾಯ ಗೊಂಡಿದ್ದು, ಸ್ಥಳದಲ್ಲಿ ಸೇರಿದವರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Join Whatsapp