Home ಟಾಪ್ ಸುದ್ದಿಗಳು ಬೊಮ್ಮಾಯಿ ಸರ್ಕಾರದಲ್ಲಿ ಯಾರಿಗೆ ಸಿಗಲಿದೆ ಡಿ.ಸಿ.ಎಂ ಪಟ್ಟ?

ಬೊಮ್ಮಾಯಿ ಸರ್ಕಾರದಲ್ಲಿ ಯಾರಿಗೆ ಸಿಗಲಿದೆ ಡಿ.ಸಿ.ಎಂ ಪಟ್ಟ?

ಬೆಂಗಳೂರು, ಜು.29: ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾದ ನಂತರ, ಉಪ ಮುಖ್ಯಮಂತ್ರಿ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಹಲವರ ಹೆಸರುಗಳು ಕೇಳಿಬರುತ್ತಿವೆ.

ಬೊಮ್ಮಾಯಿ ಸರ್ಕಾರದಲ್ಲಿ ಒಟ್ಟು ನಾಲ್ವರಿಗೆ ಡಿಸಿಎಂ ಪಟ್ಟ ಸಿಗುವ ಸಾಧ್ಯತೆ ಇದ್ದು, ಡಿಸಿಎಂ ಹುದ್ದೆಯ ರೇಸ್ ನಲ್ಲಿ ಬಿ. ಶ್ರೀರಾಮುಲು, ಕೆ.ಎಸ್. ಈಶ್ವರಪ್ಪ, ಆರ್. ಅಶೋಕ್, ಡಾ. ಅಶ್ವತ್ಥ್ ನಾರಾಯಣ, ಸಿ.ಟಿ. ರವಿ, ಗೋವಿಂದ ಕಾರಜೋಳ, ಅರವಿಂದ್ ಬೆಲ್ಲದ್ ಇದ್ದಾರೆ. ಇವರ ಪೈಕಿ ನಾಲ್ವರಿಗೆ ಡಿಸಿಎಂ ಹುದ್ದೆ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ಹೋಗಿ ಅಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಈ ನಡುವೆ ಸಚಿವ ಸ್ಥಾನ ಪಡೆಯಲು ಹಲವರು ಪ್ರಯತ್ನ ಮುಂದುವರೆಸಿದ್ದು, ಯಾರಿಗೆಲ್ಲಾ ಸಚಿವ ಸ್ಥಾನ ಸಿಗಲಿದೆ ಎನ್ನುವ ಕುತೂಹಲ ಮೂಡಿದೆ.

Join Whatsapp
Exit mobile version