ಹೊಸದಿಲ್ಲಿ: ಭಾರತದ ಔಷಧೀಯ ಸಂಸ್ಥೆ ಮರಿಯನ್ ಬಯೋಟೆಕ್ ತಯಾರಿಸಿರುವ ಎರಡು ಕೆಮ್ಮಿನ ಸಿರಪ್‌ಗಳನ್ನು ಬಳಕೆ ಮಾಡಬಾರದು ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಸೂಚನೆ ನೀಡಿದೆ.
ಮರಿಯನ್ ಬಯೋಟೆಕ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ತಯಾರಿಸಿರುವ ಅಬ್ರೊನಾಲ್ ಮತ್ತು ಡಾಕ್-1 ಮ್ಯಾಕ್ಸ್ ಕೆಮ್ಮು ಸಿರಪ್ ತೆಗೆದುಕೂಳ್ಳದಂತೆ ಡಬ್ಲ್ಯುಎಚ್‌ಒ ಸೂಚಿಸಿದೆ.
ಇತ್ತೀಚೆಗೆ ಮರಿಯನ್ ಬಯೋಟೆಕ್ ತಯಾರಿಸಿದ ಕೆಮ್ಮಿನ ಸಿರಪ್ ಸೇವನೆಯಿಂದ ಉಜ್ಬೇಕಿಸ್ತಾನದಲ್ಲಿ 18 ಮಕ್ಕಳು ಮೃತಪಟ್ಟಿದ್ದರು. ಉಜ್ಬೇಕಿಸ್ತಾನದ ಆರೋಗ್ಯ ಸಚಿವಾಲಯದ ಪರೀಶೀಲನೆಯಲ್ಲಿ ಕೆಮ್ಮಿನ ಸಿರಪ್‌ಗಳಲ್ಲಿ ಎಥಿಲೀನ್ ಗ್ಲೈಕೋಲ್‌ನ ವಿಷಕಾರಿ ರಾಸಾಯನಿಕ ಪತ್ತೆಯಾಗಿತ್ತು.