ನನ್ನ ವಿರುದ್ಧ ಮಾತನಾಡಿದ ಮಠಾಧೀಶರು ಈಗ ಮೌನವಹಿಸಿದ್ದು ಯಾಕೆ: ಸಿದ್ದರಾಮಯ್ಯ

Prasthutha|

ಬೆಂಗಳೂರು: ಮಾಂಸ ತಿಂದು ದೇವಸ್ಥಾನಕ್ಕೆ ಹೋದ ಸಿ.ಟಿ.ರವಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದು, ನನ್ನ ವಿರುದ್ಧ ಮಾತನಾಡಿದ ಮಠಾಧೀಶರು ಈಗ ಮೌನವಹಿಸಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ.

- Advertisement -


ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿರುವ ವಿಡಿಯೋ ಜಗತ್ತಿಗೆಲ್ಲ ಸತ್ಯ ಸಾರುತ್ತಿರುವಾಗ ತಾನು ತಿಂದದ್ದು ನಿಜ, ದೇವಸ್ಥಾನದ ಒಳಪ್ರವೇಶಿಸಿಲ್ಲ, ರಸ್ತೆಯಲ್ಲಿಯೇ ನಿಂತು ಕೈಮುಗಿದಿದ್ದೆ” ಎಂಬ ಸಿ.ಟಿ.ರವಿ ಅವರ ವಾದ, ಸದಾ ಹಸಿಹಸಿ ಸುಳ್ಳು ಹೇಳುವ ಅವರ ಹುಟ್ಟು ಗುಣಕ್ಕೆ ತಕ್ಕ ಹಾಗೆ ಇದೆ ಎಂದು ಕುಟುಕಿದ್ದಾರೆ.


ಮಾಂಸ ತಿನ್ನುವುದು ತಿನ್ನದಿರುವುದು, ದೇವಸ್ಥಾನಗಳಿಗೆ ಹೋಗುವುದು ಹೋಗದಿರುವುದು ವೈಯಕ್ತಿಕ ಆಯ್ಕೆಗಳು. ಇದು ರಾಜಕೀಯ ಚರ್ಚೆಯ ವಸ್ತು ಆಗಬಾರದು. ರಾಜಕೀಯ ನಾಯಕರು ಜನತೆಯ ಕಲ್ಯಾಣ, ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚಿಸಬೇಕು. ಬೇರೆಯವರ ದೂಷಣೆಯಲ್ಲಿ ನಿರತರಾಗಿರುವ ಸಿ.ಟಿ.ರವಿ ಅವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ ಎಂದು ವ್ಯಂಗ್ಯವಾಡಿದ್ದಾರೆ.
ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಸುಳ್ಳು ಸುದ್ದಿಯನ್ನೇ ಪ್ರಚಾರ ಮಾಡಿ ನನ್ನನ್ನು ಹಿಂದೂ ವಿರೋಧಿ ಎಂದು ರಾಜ್ಯ ಬಿಜೆಪಿ ನಾಯಕರು ಪ್ರಚಾರ ಮಾಡಿದ್ದರು. ಆ ರೀತಿ ಅಪಪ್ರಚಾರ ಮಾಡಿದವರೆಲ್ಲರೂ ಈಗ ಸಿ.ಟಿ.ರವಿ ಅವರ ಕೃತ್ಯದಿಂದಾಗಿ ತಾವು ಮಾಡಿದ್ದ ವಾಂತಿಯನ್ನು ತಾವೇ ತಿನ್ನುವಂತಾಗಿದೆ.

- Advertisement -


ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ರಾಜ್ಯ ಬಿಜೆಪಿ ನಾಯಕರ ಸುಳ್ಳು ಸುದ್ದಿಯನ್ನು ನಂಬಿ ನನ್ನನ್ನು ಟೀಕಿಸಿದ್ದ ರಾಜ್ಯದ ಕೆಲವು ಮಠಾಧೀಶರು, ಸಿ.ಟಿ.ರವಿ ಅವರು ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿರುವ ಬಗ್ಗೆ ಮೌನವಾಗಿರುವುದು ನನಗೆ ಅಚ್ಚರಿ ಉಂಟುಮಾಡಿದೆ ಎಂದು ಹೇಳಿದ್ದಾರೆ.

Join Whatsapp