ಡಬಲ್ ಇಂಜಿನ್ ಸರ್ಕಾರದ ವಿರುದ್ಧ ಪ್ರತಿಭಟಿಸುವ ಸ್ಥಿತಿ ಸಚಿವ ಶ್ರೀರಾಮುಲುಗೆ ಒದಗಿದ್ದೇಕೆ? ಕಾಲೆಳೆದ ಕಾಂಗ್ರೆಸ್

Prasthutha|

ಬಳ್ಳಾರಿ: ಡಬಲ್ ಇಂಜಿನ್ ಸರ್ಕಾರದ ವಿರುದ್ಧ ಪ್ರತಿಭಟಿಸುವ ಸ್ಥಿತಿ ಸಚಿವ ಶ್ರೀರಾಮುಲುಗೆ ಒದಗಿದ್ದೇಕೆ ಎಂದು ಕಾಂಗ್ರೆಸ್ ಶ್ರೀರಾಮುಲು ಕಾಲೆಳೆದಿದೆ.

- Advertisement -


ಬಳ್ಳಾರಿ ತಾಲೂಕಿನ ಬಿ ಡಿ ಹಳ್ಳಿ ಬಳಿಯ ವೇದಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಮೇಲ್ಸೆತುವೆಯ ಎಲ್ಎಲ್ಸಿ ಕಾಲುವೆಯ ದುರಸ್ತಿ ಕೆಲಸ ನಡೆಯುತ್ತಿದೆ. ಈ ಕಾಮಗಾರಿಗೆ ವೇಗ ಸಿಗಲೆಂದು ಮಂಗಳವಾರ ರಾತ್ರಿ ನದಿ ಬಳಿಯೇ ಹಾಸಿಗೆ ಹಾಸಿಕೊಂಡು ಮಲಗುವ ಮೂಲಕ ಸಚಿವ ಶ್ರೀರಾಮುಲು ಗಮನ ಸೆಳೆದಿದ್ದಾರೆ. ಈ ನಡುವೆ ಕಾಂಗ್ರೆಸ್ ಟ್ವೀಟ್ ಮಾಡಿ ಕ್ಯಾಬಿನೆಟ್ ಸಚಿವರು ತಮ್ಮದೇ ಡಬಲ್ ಇಂಜಿನ್ ಸರ್ಕಾರದ ವಿರುದ್ಧ ಪ್ರತಿಭಟಿಸುವ ಸ್ಥಿತಿ ಒದಗಿದ್ದೇಕೆ? ತಮ್ಮ ಮಾತನ್ನು ಯಾರೂ ಕೇಳುತ್ತಿಲ್ಲವೇ? ಅಥವಾ ಇದು ಕೇವಲ ತಳ್ಳುವ ಸರ್ಕಾರವೇ? ಎಂದು ಕಾಂಗ್ರೆಸ್ ಸರಣಿ ಪ್ರಶ್ನೆಗಳನ್ನು ಸಚಿವ ಶ್ರೀರಾಮುಲು ಅವರಿಗೆ ಕೇಳುವ ಮೂಲಕ ವ್ಯಂಗ್ಯವಾಡಿದೆ.



Join Whatsapp