ಹಿಂದೂ ರಾಷ್ಟ್ರಕ್ಕಾಗಿ ಒತ್ತಾಯಿಸುವವರ ವಿರುದ್ಧ ಏಕೆ ಕ್ರಮ ಇಲ್ಲ: ಸಿಖ್ಖರ ಉನ್ನತ ಸಂಘಟನೆ ಮುಖ್ಯಸ್ಥ

Prasthutha|

►ಹಿಂದೂ ರಾಷ್ಟ್ರಕ್ಕಾಗಿ ಕರೆ ನೀಡುವವರ ವಿರುದ್ಧವೂ NSA ಅಡಿಯಲ್ಲಿ ಪ್ರಕರಣ ದಾಖಲಿಸಬೇಕು

- Advertisement -


ಅಮೃತಸರ: ಪ್ರತ್ಯೇಕತಾವಾದಿ ಬೋಧಕ ಅಮೃತ್ ಪಾಲ್ ಸಿಂಗ್ ವಿರುದ್ಧ ಪಂಜಾಬ್ ಪೊಲೀಸರು ನಡೆಸಿದ ದಬ್ಬಾಳಿಕೆಗೆ ಸಂಬಂಧಿಸಿದಂತೆ ಭಗವಂತ್ ಮಾನ್ ಸರಕಾರ ಹಾಗೂ ಕೇಂದ್ರದ ವಿರುದ್ಧ ಸಿಖ್ಖರ ಉನ್ನತ ಸಂಘಟನೆ ಅಕಾಲ್ ತಖ್ತ್ ಹೇಳಿಕೆ ನೀಡಿದ್ದು, “ಹಿಂದೂ ರಾಷ್ಟ್ರಕ್ಕಾಗಿ ಬೇಡಿಕೆ ಇಡುವವರ” ವಿರುದ್ಧ ಇದೇ ರೀತಿಯ ಕ್ರಮವನ್ನು ಏಕೆ ತೆಗೆದುಕೊಳ್ಳುವುದಿಲ್ಲ” ಎಂದು ಪ್ರಶ್ನಿಸಿದೆ.


ಪ್ರತ್ಯೇಕತಾವಾದಿ ಬೋಧಕನ ವಿರುದ್ಧದ ದಮನದ ಸಂದರ್ಭದಲ್ಲಿ ಬಂಧಿಸಲ್ಪಟ್ಟ ಸಿಖ್ ಯುವಕರನ್ನು ಬಿಡುಗಡೆ ಮಾಡುವಂತೆ ಅಕಾಲ್ ತಖ್ತ್ ಜತೇದಾರ್ ಗ್ಯಾನಿ ಹರ್ಪ್ರೀತ್ ಸಿಂಗ್ ರಾಜ್ಯ ಸರ್ಕಾರಕ್ಕೆ 24 ಗಂಟೆಗಳ ಗಡುವು ನೀಡಿದ್ದು, ಪಂಜಾಬ್ ನ ಪರಿಸ್ಥಿತಿಯ ಬಗ್ಗೆ ಚರ್ಚಿಸಲು ಬುದ್ಧಿಜೀವಿಗಳು, ವಕೀಲರು, ಪತ್ರಕರ್ತರು, ಧಾರ್ಮಿಕ ಮತ್ತು ಸಾಮಾಜಿಕ ನಾಯಕರನ್ನು ಒಳಗೊಂಡ ಸಿಖ್ ಸಂಘಟನೆಗಳ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದ್ದಾರೆ.

- Advertisement -


ಖಲಿಸ್ತಾನದ ಬೇಡಿಕೆಯನ್ನು ಬೆಂಬಲಿಸಿದ ಆರೋಪದ ಮೇಲೆ ಬಂಧಿಸಲ್ಪಟ್ಟವರ ವಿರುದ್ಧ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆಯನ್ನು ಏಕೆ ಹೇರಲಾಗಿದೆ ಎಂದು ಪ್ರಶ್ನಿಸಿದ ಅವರು, “ಹಿಂದೂ ರಾಷ್ಟ್ರವನ್ನು ಬಯಸುವ ಲಕ್ಷಾಂತರ ಜನರಿದ್ದಾರೆ. ಹಿಂದೂ ರಾಷ್ಟ್ರಕ್ಕಾಗಿ ಕರೆ ನೀಡುವವರ ವಿರುದ್ಧವೂ ಪ್ರಕರಣ ದಾಖಲಿಸಬೇಕು. ಅವರ ವಿರುದ್ಧವೂ ಎನ್ ಎಸ್ ಎ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.

Join Whatsapp