ಜೆಡಿಎಸ್ ಉಳಿಸೋಕೆ ನಾವ್ಯಾಕೆ ಸಹಕಾರ ಕೊಡಬೇಕು: ಮೈತ್ರಿಗೆ ಮಾಜಿ ಶಾಸಕ ಪ್ರೀತಂಗೌಡ ಅಸಮಾಧಾನ

Prasthutha|

ಹಾಸನ: ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಮಾಜಿ ಶಾಸಕ ಪ್ರೀತಂಗೌಡ ಅಸಮಾಧಾನ ಹೊರ ಹಾಕಿದ್ದಾರೆ.

- Advertisement -

ಹಾಸನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಪ್ರೀತಂಗೌಡ, ನಾನು ಬಿಜೆಪಿಯ ಒಬ್ಬ ನಿಷ್ಠಾವಂತ ಕಾರ್ಯಕರ್ತನಾಗಿ ಜೆಡಿಎಸ್ ಪಕ್ಷ ಉಳಿಸೋದಕ್ಕೆ ನಾವ್ಯಾಕೆ ಸಹಕಾರ ಮಾಡಬೇಕು. ಯಾವುದೇ ಕಾರಣಕ್ಕೂ ನಮ್ಮಿಂದ ಅದು ಸಾಧ್ಯವಿಲ್ಲ ಎಂದ ಪ್ರೀತಂಗೌಡ, ಬೆಂಗಳೂರು ಗ್ರಾಮಾಂತರದಲ್ಲಿ ಡಿ.ಕೆ ಸುರೇಶ್ ಸೋಲಿಸಲು ಯೋಗೇಶ್ವರ್ ಹೊಂದಾಣಿಕೆ ಬಗ್ಗೆಯೂ ಬೇಸರ ಹೊರ ಹಾಕಿದರು.

ನಾವು ಕುಟುಂಬ ರಾಜಕಾರಣ ವಿರುದ್ಧ ಹೋರಾಟ ಮಾಡುತ್ತಿದ್ದೇವೆ
28 ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ನಿಲ್ಲಲಿ, ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಬೇಕು ಅಂತ ಬಂದರೆ ಸ್ವಾಗತವಿದೆ. ಬಿಜೆಪಿ ಪಕ್ಷ ಉಳಿಸಿಕೊಳ್ಳಲು ನಮಗೆ ಗೊತ್ತಿದೆ. ನಾವು ಕುಟುಂಬ ರಾಜಕಾರಣ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಹಾಸನದಲ್ಲಿ ಅವರ ಕುಟುಂಬದವರು ಅಭ್ಯರ್ಥಿ ಆಗುತ್ತಾರೆ. ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಾಗಿ ಜೆಡಿಎಸ್ ಉಳಿಸಲು ನಾನ್ಯಾಕೆ ಕೆಲಸ ಮಾಡಬೇಕು. ಯಾವುದೇ ಕಾರಣಕ್ಕೂ ಒಪ್ಪಲ್ಲ.

Join Whatsapp