Home ಟಾಪ್ ಸುದ್ದಿಗಳು ಅವಕಾಶ ಸಿಕ್ಕಿದರೆ ಮುಸ್ಲಿಮ್ ಸಮುದಾಯದವರು ಮುಖ್ಯಮಂತ್ರಿ ಯಾಕಾಗಬಾರದು?: ಕುಮಾರಸ್ವಾಮಿ

ಅವಕಾಶ ಸಿಕ್ಕಿದರೆ ಮುಸ್ಲಿಮ್ ಸಮುದಾಯದವರು ಮುಖ್ಯಮಂತ್ರಿ ಯಾಕಾಗಬಾರದು?: ಕುಮಾರಸ್ವಾಮಿ

ಕೋಲಾರ: ಮಹಿಳೆಯರ ಪ್ರಾಮಾಣಿಕ ಅಭಿವೃದ್ಧಿಗೆ ಜೆಡಿಎಸ್ ಪಕ್ಷ ಬದ್ಧವಾಗಿದ್ದು, ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ಮಹಿಳೆಯರನ್ನು ಉಪಮುಖ್ಯಮಂತ್ರಿ ಮಾಡಲು ಸಿದ್ಧವಿದ್ದೇವೆ. ಅದೇ ರೀತಿ ಅವಕಾಶ ಸಿಕ್ಕಿದರೆ ಮುಸ್ಲಿಮ್ ಸಮುದಾಯದವರು ಮುಖ್ಯಮಂತ್ರಿ ಯಾಕಾಗಬಾರದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆಗೆ ಹೋಗುವ ಮಕ್ಕಳು ಬಂದು ನೀವು ಮುಖ್ಯಮಂತ್ರಿ ಆಗಬೇಕು ಎಂದು ಮನವಿ ಮಾಡಿದ್ದು, ಆರತಿ ಮಾಡಿದ್ದಾಗ ದಕ್ಷಣೆ ಕೊಡಲು ಮುಂದಾದಾಗ ನಮಗೆ ದುಡ್ಡು ಬೇಡ. ಇದಕ್ಕೆ ಬದಲಾಗಿ ನಮಗೆ ಒಳ್ಳೆಯ ಶಾಲೆ ಮಾಡಿ ಎಂದು ಮಕ್ಕಳು ಹೇಳಿದ್ದಾರೆ. ಮುಂದಕ್ಕೆ ದುಡ್ಡು ಕೊಟ್ಟು ಮತ ಪಡೆಯುವುದನ್ನು ಜನರು ತಡೆಯುತ್ತಾರೆ ಎಂದು ಅವರು ತಿಳಿಸಿದರು.

ಸಾಮಾಜಿಕ ನ್ಯಾಯ ನೀಡಲು ಈಗಾಗಲೇ ದಲಿತ ಸಮುದಾಯದಲ್ಲಿ ಉಪಮುಖ್ಯಮಂತ್ರಿ ಮಾಡುತ್ತೇನೆಂದು ಘೋಷಣೆ ಮಾಡಿದ್ದೇನೆ. ಮಹಿಳೆಯರ ಸಬಲೀಕರಣಕ್ಕಾಗಿ ಒಂದು ವೇಳೆ ಅವಶ್ಯಕತೆ ಬಿದ್ದಲ್ಲಿ ಯಾವುದೇ ಸಮುದಾಯದ ಮಹಿಳೆಯನ್ನು ಉಪಮುಖ್ಯಮಂತ್ರಿ ಮಾಡಲು ನಮ್ಮ ಜೆಡಿಎಸ್ ಪಕ್ಷ ತಯಾರಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ದಲಿತ ಸಮುದಾಯದವರಿಗೆ ಡಿಸಿಎಂ ಸ್ಥಾನ ನೀಡುತ್ತೇನೆಂದು ಈಗಾಗಲೇ ಹೇಳಿದ್ದೇನೆ. ನಾನು ದಲಿತ ಸಮುದಾಯದ ಮತಗಳನ್ನು ಸೆಳೆಯಲು ಹೀಗೆ ಹೇಳಿಲ್ಲ. ಆ ಸಮುದಾಯದ ಸಮಸ್ಯೆಗಳನ್ನು ಆಲಿಸಿದ ಮೇಲೆ ಸಾಮಾಜಿಕ ನ್ಯಾಯ ಒದಗಿಸಲು ಹೇಳಿದ್ದೇನೆ. ಹಾಗೇ ಮಹಿಳೆಯರ ಸಮಸ್ಯೆಗಳನ್ನು ಆಲಿಸಿದ ಬಳಿಕ ಮಹಿಳೆಯರ ಸಬಲೀಕರಣಕ್ಕಾಗಿ ಡಿಸಿಎಂ ಸ್ಥಾನ ಕೊಡಲು ಬದ್ದನಾಗಿದ್ದೇನೆ. ಆದರೆ, ನಮ್ಮ ಪಕ್ಷದಲ್ಲಿ ಹೆಬ್ಬೆಟ್ಟಿನ ಉಪಮುಖ್ಯಮಂತ್ರಿ ಇರುವುದಿಲ್ಲ. ಪ್ರಾಮಾಣಿಕವಾಗಿ ಕೆಲಸ ಮಾಡುವವರನ್ನು ಡಿಸಿಎಂ ಮಾಡುತ್ತೇವೆ ಎಂದರು.

Join Whatsapp
Exit mobile version