ಲಾಕ್ ಡೌನ್, ಕರ್ಫ್ಯೂ ಹೇರುವುದಾದರೆ ವ್ಯಾಕ್ಸಿನ್ ಯಾಕೆ : ತಮ್ಮದೇ ಸರ್ಕಾರದ ವಿರುದ್ಧ ಪ್ರತಾಪ್ ಸಿಂಹ ಆಕ್ರೋಶ

Prasthutha|

ಮೈಸೂರು : ಲಾಕ್ ಡೌನ್, ಕರ್ಫ್ಯೂ ಹೇರುವುದಾದರೆ ವ್ಯಾಕ್ಸಿನ್ ಯಾಕೆ ಬೇಕಿತ್ತು ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ರಾಜ್ಯ ಸರಕಾರವನ್ನು ಪ್ರಶ್ನಿಸಿದ್ದಾರೆ.

- Advertisement -

ಈ ಬಗ್ಗೆ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ, ಅಲ್ಲಿ ಪ್ರಚಾರ ನಡೆಯುತ್ತದೆ ತಾನೇ? ಹೀಗಿರುವಾಗ ಕರ್ನಾಟಕದಲ್ಲಿ ಯಾಕೆ ಕರ್ಫ್ಯೂ, ಲಾಕ್ ಡೌನ್ ಅಂತಾ ಜನರನ್ನು ಮತ್ತೆ ಕಂಗಾಲು ಮಾಡುತ್ತಿದ್ದೀರಿ? ಜನರನ್ನು ಭೀತಿಯಲ್ಲಿ ಇಡುವುದನ್ನು ಮೊದಲು ಸರಕಾರ ನಿಲ್ಲಿಸಲಿ ಎಂದು ಹೇಳಿದ್ದಾರೆ.



Join Whatsapp